ತತ್ತರಿಸಿದ ಉತ್ತರ ಭೀಮಾ, ಕೃಷ್ಣಾರ್ಭಟ
5 ಜಿಲ್ಲೆಗಳಲ್ಲಿ ಪ್ರವಾಹ: ಜನರ ಸ್ಥಳಾಂತರ
Team Udayavani, Aug 5, 2019, 6:03 AM IST
ಚಿಕ್ಕೋಡಿ ಬಳಿಯ ಸದಲಗಾ-ಬೋರ್‌ಗಾಂವ್ ಸೇತುವೆ ಬಳಿ ದೂಧ್‌ಗಂಗಾ ನದಿ ಭಾನುವಾರ ಉಕ್ಕಿ ಹರಿಯುತ್ತಿರುವುದು.
ಹುಬ್ಬಳ್ಳಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬರಗಾಲದಲ್ಲೂ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಕೃಷ್ಣಾ, ಭೀಮಾ, ವೇದಗಂಗಾ, ದೂಧ್‌ಗಂಗಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಕಾಳಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಗಂಜಿ ಕೇಂದ್ರ ತೆರೆಯಲಾಗಿದ್ದು, 38 ಸೇತುವೆಗಳು ಮುಳುಗಡೆಯಾಗಿ ಕೆಲವೆಡೆ ಸಂಪರ್ಕ ಕಡಿತಗೊಂಡಿದೆ. 900ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ಮಹಾರಾಷ್ಟ್ರದ ಕೊಯ್ನಾ ಜಲಾಶಯ ವ್ಯಾಪ್ತಿ, ಅಂಬೋಲಿ, ಅಜರಾ ಪ್ರದೇಶ, ಮಲಪ್ರಭಾ ನದಿಯ ಉಗಮ ಸ್ಥಾನ ಖಾನಾಪುರದ ಕಣಕುಂಬಿ ಅರಣ್ಯದಲ್ಲಿ ಧಾರಾಕಾರ ಮಳೆಯಿಂದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಗೆ 2.31 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಕೊಯ್ನಾ ಜಲಾಶಯದಲ್ಲಿ 94 ಟಿಎಂಸಿ ನೀರು ಸಂಗ್ರಹವಾಗಿದ್ದು, ಭರ್ತಿಗೆ ಇನ್ನು 10 ಟಿಎಂಸಿ ಅಗತ್ಯವಿದೆ.
ಸ್ಥಳಾಂತರ: ಪ್ರವಾಹಕ್ಕೆ ತುತ್ತಾಗಿರುವ ಚಿಕ್ಕೋಡಿ ತಾಲೂಕು ಸೇರಿದಂತೆ ಹಲವು ಪ್ರದೇಶಗಳಿಂದ ಇದುವರೆಗೆ 900ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಿದ್ದಾರೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ 2,49,823 ಕ್ಯೂಸೆಕ್ ನೀರನ್ನು 26 ಕ್ರಸ್ಟ್‌ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿದೆ.
ಭೀಮಾ ಭರ್ತಿ: ಬರದಿಂದ ಬತ್ತಿ ಬರಿದಾಗಿದ್ದ ಭೀಮೆ ಒಡಲು ಕೂಡ ಇದೀಗ ತುಂಬಿಕೊಂಡಿದೆ. ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರಕ್ಕೆ ಸೇರಿದ 8 ಬ್ಯಾರೇಜ್‌ಗಳು ಭರ್ತಿಯಾಗಿ ಪ್ರವಾಹ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.