
ಧಾರಾಕಾರ ಮಳೆ: ಲೋಂಡಾದಲ್ಲಿ ಭೂಕುಸಿತ; ರೈಲ್ವೇ ಸಂಚಾರ ತಾತ್ಕಾಲಿಕ ಸ್ಥಗಿತ
Team Udayavani, Aug 4, 2019, 7:48 PM IST

ಸಾಂದರ್ಭಿಕ ಚಿತ್ರ
ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿದ್ದಾರೆ. ಈ ಕಾಮಗಾರಿ ರವಿವಾರ ರಾತ್ರಿ ವೇಳೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.
ಮಧ್ಯಾಹ್ನ 1 ಗಂಟೆಗೆ ಪುಣೆ ಎರ್ನಾಕುಲಂ ರೈಲ ತೆರಳಿದ ನಂತರ ಈ ಘಟನೆ ನಡೆದಿದ್ದು ಭಾರೀ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಭೂ ಕುಸಿತದಿಂದಾಗಿ ಮೀರಜ್ ಹಾಗೂ ಗೋವಾದ ಕ್ಯಾಸಲ್ ರಾಕ್ ಬಳಿ ಸಂಚರಿಸುವ ರೈಲನ್ನು ಬೆಳಗಾವಿವರೆಗೆ ಮಾತ್ರ ಓಡಿಸಲಾಗುವದು. ಇದೇ ರೈಲು ಆ. 5 ರಂದು ಬೆಳಗಾವಿಯಿಂದ ಮೀರಜ್ ಗೆ ಸಂಚರಿಸಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.