ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
ಗುತ್ತಿಗೆದಾರರ ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನಲು ಈ ಸಾಕ್ಷ್ಯ ಸಾಲದೇ?: ಕೇಂದ್ರ ಸಚಿವ ಕುಮಾರಸ್ವಾಮಿ
Team Udayavani, Jan 7, 2025, 10:18 PM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಶೇ. 60ರಷ್ಟು ಕಮಿಷನ್ ನಡೆಯುತ್ತಿದೆ ಎನ್ನುವುದು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ, ದಾಖಲೆ ಸಹಿತ ಆರೋಪ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ತಿರುಗೇಟಿಗೆ ಕಮಿಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ವಾಗ್ಧಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ. ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಜಲ ಸಂಪನ್ಮೂಲ ಇಲಾಖೆ: 14,600 ಕೋಟಿ, ಲೋಕೋಪಯೋಗಿ ಇಲಾಖೆ: 10,000 ಕೋಟಿ, ಗ್ರಾಮೀಣಾಭಿವೃದ್ಧಿ -ಪಂಚಾಯತ್ ರಾಜ್: 3,100 ಕೋಟಿ, ಸಣ್ಣ ನೀರಾವರಿ: 2,800 ಕೋಟಿ, ಇತರೆ ಇಲಾಖೆ: 1,500 ಕೋಟಿ ಸೇರಿ ಒಟ್ಟು 32,000 ಕೋಟಿ ರೂ. ಗುತ್ತಿಗೆದಾರರ ಬಿಲ್‌ಗಳು ಬಾಕಿ ಇವೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ. ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ.
ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ಸಿಎಂ ಮತ್ತು ಸಚಿವರಿಗೆ ಕೇಂದ್ರ ಸಚಿವರು ಕಿವಿಮಾತು ಹೇಳಿದ್ದಾರೆ.
Give evidence… you are asking me to provide evidence… well, Honorable @siddaramaiah, your ‘guarantee’ government is the loot’s testimony. The journalists themselves have revealed the truth of your loot!
How much negligence is your government showing towards contractors, this… pic.twitter.com/gb8emv6Ti1
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
MUST WATCH
ಹೊಸ ಸೇರ್ಪಡೆ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.