Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Team Udayavani, Oct 5, 2024, 6:45 AM IST
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಂಬಂಧವಾಗಿ ಮಂಗಳೂರಿನ ವಕೀಲರು ಹಾಗೂ ಹೋರಾಟ ಸಮಿತಿಯವರ ಜತೆಯಲ್ಲಿ ಶೀಘ್ರದಲ್ಲಿ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂಬ ಹಕ್ಕೊತ್ತಾಯದ ಭಾಗವಾಗಿ ಶುಕ್ರವಾರದಂದು ಹೋರಾಟ ಸಮಿತಿಯ ಪ್ರಮುಖರು ಶುಕ್ರವಾರದಂದು ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಸಂಸದರಿಂದ ಭರವಸೆ
ಹೋರಾಟ ಸಮಿತಿಯವರು ಶನಿವಾರದಂದು ಮಂಗಳೂರು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರನ್ನು ಕೂಡ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ರಚನೆಗೆ ಪೂರಕವಾಗಿ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಲ್. ಧರ್ಮ, ಅಮುಕ್¤ ಪದಾಧಿಕಾರಿಗಳು ಹಾಗೂ ಕಾಲೇಜುಗಳಿಗೆ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರುವಂತೆ ಮನವಿ ಸಲ್ಲಿಸಲಾಯಿತು.
ಹೋರಾಟ ಸಮಿತಿಯ ಸಂಚಾಲಕ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ, ಹಿರಿಯ ವಕೀಲ ಎಂ.ಪಿ.ನೊರೊನ್ಹಾ, ಜತೆ ಕಾರ್ಯದರ್ಶಿ ಜ್ಯೋತಿ, ಹಿರಿಯ ಸದಸ್ಯೆ ಸುಮನಾ ಶರಣ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.