High Court; ದ್ವೇಷ ಭಾಷಣ: ಬಿಜೆಪಿ ನಾಯಕರ ವಿರುದ್ಧ ಅರ್ಜಿ ಹೈಕೋರ್ಟ್‌ಲ್ಲಿ ವಜಾ
ಪ್ರತಿವಾದಿಗಳ ವಿರುದ್ಧದ ಆರೋಪಗಳು ಸಾಮಾನ್ಯ ಸ್ವರೂಪದ್ದು
Team Udayavani, Jul 9, 2024, 11:15 PM IST
ಬೆಂಗಳೂರು: ದ್ವೇಷ ಭಾಷಣದ ಆರೋಪದ ಮೇಲೆ ಬಿಜೆಪಿ ನಾಯಕರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ವಿಚಾರವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮೊಹಮ್ಮದ್ ಖಲೀಲುಲ್ಲಾ 2022ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಕುರಿತು ನ್ಯಾಯಾಲಯ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡುತ್ತಿಲ್ಲ. ಅರ್ಜಿಯಲ್ಲಿ ಪ್ರತಿವಾದಿಗಳ ವಿರುದ್ಧ ಮಾಡಲಾಗಿರುವ ಆರೋಪಗಳು ಸಾಮಾನ್ಯ ಸ್ವರೂಪದ್ದಾಗಿದ್ದು ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಲಾಗದು. ಸಾರ್ವಜನಿಕ ಹಿತಾಸಕ್ತಿ ಹೊರತುಪಡಿಸಿ ಬೇರೆ ಉದ್ದೇಶ ಈ ಅರ್ಜಿಯಲ್ಲಿ ಕಾಣುತ್ತಿದೆ. ದಂಡ ಸಮೇತ ಈ ಅರ್ಜಿ ವಜಾಗೊಳಿಸಬೇಕು. ಆದರೆ ನ್ಯಾಯಾಲಯ ಉದಾರತೆ ತೋರುತ್ತಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.