ನೀತಿ ಸಂಹಿತೆ ಉಲ್ಲಂಘನೆ ಕೇಸ್; ಪರಂ ಸಮನ್ಸ್ ಗೆ ಹೈಕೋರ್ಟ್ ಮಧ್ಯಂತರ ತಡೆ
Team Udayavani, May 30, 2019, 5:30 PM IST
ಬೆಂಗಳೂರು: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.
ಚುನಾವಣಾ ಪ್ರಚಾರದ ವೇಳೆ ಸಾವಳಗಿ ಗ್ರಾಮದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುತ್ತ ಗ್ರಾಮದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಮತ ಚಲಾಯಿಸಿದರೆ ಮೂರು ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿದ್ದರು. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ದೂರು ನೀಡಿದ್ದರು.
ಎಫ್ಐಆರ್ ದಾಖಲಿಸಿಕೊಂಡಿದ್ದ ಜಮಖಂಡಿ ಪೊಲೀಸರು ವಿಚಾರಣೆ ನಡೆಸಿ ಚಾಜ್೯ಶೀಟ್ ಸಲ್ಲಿಸಿದ್ದರು. ಇದನ್ನು ಆಧರಿಸಿ ವಿಶೇಷ ನ್ಯಾಯಾಲಯ 2019ರ ಏ.25 ರಂದು ಸಮನ್ಸ್ ಜಾರಿಗೊಳಿಸಿ ಮೇ 31ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದೀಗ ಹೈಕೋರ್ಟ್ ಸಮನ್ಸ್ ಗೆ ಮಧ್ಯಂತರ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.