HighCourt; “ನಾಯಕರಿಗೆ ಮಾತಿನ ಮೇಲೆ ಹಿಡಿತ ಇರಲಿ’
ಶಾಸಕ ಡಾ| ಭರತ್ ಶೆಟ್ಟಿ ಅವರ ಅರ್ಜಿಯ ವಿಚಾರಣೆ ವೇಳೆ ಅಭಿಪ್ರಾಯ
Team Udayavani, Jul 20, 2024, 7:06 AM IST
ಬೆಂಗಳೂರು: ಸಮಾಜದಲ್ಲಿ ಜನರು ಬಳಸುವ ಭಾಷೆಯ ಘನತೆ ಕುಸಿದರೆ ಅದು ನಾಗರಿಕತೆಯ ಅವಸಾನದ ಸಂಕೇತ. ಜನನಾಯಕರಾದವರು ತಮ್ಮ ಮಾತುಗಳ ಮೇಲೆ ಹಿಡಿತ ಹೊಂದಿರಬೇಕು. ಇಂಥವರನ್ನು ಕಂಡೇ ಕನಕದಾಸರು “ನಾಲಗೆ ಕುಲವ ಅರುಹಿತು’ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ ಅವರ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯ.
ತಮ್ಮ ವಿರುದ್ಧ ಮಂಗಳೂರಿನ ಕಾವೂರು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಡಾ| ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯು ಶುಕ್ರವಾರ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ಬಳಿಕ ಜನಪ್ರತಿನಿಧಿಗಳು ತಾವು ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಂಡಿರಬೇಕು. ಭಾಷೆಯನ್ನು ಯಾವತ್ತೂ ಸುಂದರವಾಗಿ, ಮೃದುವಾಗಿ ಬಳಸಬೇಕು ಎಂದು ನ್ಯಾಯಪೀಠ ಸೂಕ್ಷ್ಮವಾಗಿ ಹೇಳಿತು.
ಅಂತಿಮವಾಗಿ ರಾಜ್ಯ ಸರಕಾರ ಹಾಗೂ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಶಾಸಕ ಭರತ್ ಶೆಟ್ಟಿ ವಿರುದ್ಧದ ಜನನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.