High Court Order: ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ
ರಾಜ್ಯದ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ ತಂತ್ರ-ಪ್ರತಿತಂತ್ರ , ಪಕ್ಷದ ವರ್ಚಸ್ಸಿನ ಹೆಸರಲ್ಲಿ ರಾಜಕೀಯ ದಾಳ
Team Udayavani, Sep 25, 2024, 6:57 AM IST
ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ ನಡೆಸಲು ಅನುಮತಿ ದೊರಕಿದೆ. ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಅಂಶಗಳನ್ನು ಮುಂದಿಟ್ಟುಕೊಂಡು ಸಿಎಂ ವಿರೋಧಿಗಳು ದಾಳ ಉರುಳಿಸಲು ಆರಂಭಿಸಿದ್ದಾರೆ.
ಈ ಮೊದಲೇ ಪಕ್ಷದಲ್ಲಿ 2 ಬಣಗಳಿದ್ದವು. ಅವರೆಡರ ನಡುವಿನ ಮುಸುಕಿನ ಗುದ್ದಾಟ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಿಂದ ಹಿಡಿದು ಹಲವು ಸಂದರ್ಭಗಳಲ್ಲಿ ಬಹಿರಂಗಗೊಂಡಿದ್ದೂ ಇದೆ. ಆದರೆ ಸಿಎಂ ವಿರುದ್ಧ ಕೇಳಿಬಂದ ಮುಡಾ ನಿವೇಶನ ಹಂಚಿಕೆ ಹಗರಣದ ಆರೋಪ ಈ ಬಣಗಳನ್ನು ಒಗ್ಗೂಡಿಸಿತ್ತು. ಇದಕ್ಕೆ ಕಾರಣವೂ ಇತ್ತು. ಒಂದು ವಿಪಕ್ಷಗಳ ತಂತ್ರಗಾರಿಕೆಯನ್ನು ಹಣಿಯುವುದು, ಮತ್ತೂಂದು ಹೈಕಮಾಂಡ್ ಸಿಎಂ ಬೆನ್ನಿಗೆ ನಿಂತಿದ್ದಲ್ಲದೆ ಸಚಿವರು ಮತ್ತು ಶಾಸಕರಿಗೂ ಸ್ಪಷ್ಟ ಸೂಚನೆ ನೀಡಿತ್ತು. ಈಗ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಆ ಒಗ್ಗಟ್ಟಿನಲ್ಲಿ ಬಿರುಕು ಕಾಣಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.