High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್ ರದ್ದು!
ಬಿಎನ್‌ಎಸ್‌ಎಸ್ ಬಂದ ಮೇಲೆ ಸಿಆರ್‌ಪಿಸಿ ಅಡಿ ಎಫ್ಐಆರ್ ಸರಿಯಲ್ಲ: ಹೈಕೋರ್ಟ್
Team Udayavani, Oct 10, 2024, 2:39 AM IST
ಬೆಂಗಳೂರು: “ಭಾರತೀಯ ನಾಗರಿಕ ಸುರಕ್ಷ ಸಂಹಿತೆ’ (ಬಿಎನ್‌ಎಸ್‌ಎಸ್) 2023 ಜಾರಿಗೆ ಬಂದ ಮೇಲೆ ಪೊಲೀಸರು ಹಿಂದಿನ “ದಂಡ ಪ್ರಕ್ರಿಯಾ ಸಂಹಿತೆ’ (ಸಿಆರ್‌ಪಿಸಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳುವುದನ್ನು ಒಪ್ಪಲಾಗದು ಎಂದು ಹೇಳಿರುವ ಹೈಕೋರ್ಟ್, ಬಿಎನ್‌ಎಸ್‌ಎಸ್ ಜಾರಿಗೆ ಬಂದ ದಿನ 2024ರ ಜುಲೈ 1ರಂದು ಅತ್ಯಾಚಾರ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಸಿಆರ್‌ಪಿಸಿ ಅಡಿಯಲ್ಲಿ ರಾಜ್ಯದಲ್ಲಿ ದಾಖಲಾಗಿದ್ದ ಮೊದಲ ಎಫ್ಐಆರ್ ಅನ್ನು ರದ್ದುಪಡಿಸಿ ಆದೇಶಿಸಿದೆ.
ಬಿಎನ್‌ಎಸ್‌ಎಸ್ ಜಾರಿಗೆ ಬಂದ ಮೇಲೆ ಸಿಆರ್‌ಪಿಸಿ ಸೆಕ್ಷನ್ 154ರಡಿ ಪೊಲೀಸರು ದಾಖಲಿಸಿಕೊಂಡಿದ್ದ ಎಫ್ಐಆರ್ ರದ್ದುಪಡಿಸಲಾಗುತ್ತಿದೆ. ಆದರೆ ದೂರಿನ ಗಂಭೀರತೆ ಆಧರಿಸಿ ಪ್ರಕರಣವನ್ನು ಪೊಲೀಸರಿಗೆ ಹಿಂದಿರುಗಿಸಲಾಗುತ್ತಿದ್ದು, ಸಿಆರ್‌ಪಿಸಿ ಸೆಕ್ಷನ್ 154 ಬದಲಿಗೆ ಬಿಎನ್‌ಎಸ್‌ಎಸ್ ಸೆಕ್ಷನ್ 173 ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ ಬಿಎನ್‌ಎಸ್‌ಎಸ್ ಸೆಕ್ಷನ್ 193ರಡಿ ವಿಚಾರಣ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ಠಾಣೆಯಲ್ಲಿ ತಮ್ಮ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 376, 323, 506 ಹಾಗೂ 420 ಅಡಿಯಲ್ಲಿ 2024ರ ಜುಲೈ 1ರಂದು ದಾಖಲಾಗಿರುವ ಎಫ್ಐಆರ್ ಹಾಗೂ ಲಿಂಗಸುಗೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರ ಅರುಣ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಆರ್. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಈ ಆದೇಶ ಮಾಡಿದೆ. ಅಲ್ಲದೆ ವಿಚಾರಣ ನ್ಯಾಯಾಲಯಗಳು ಮತ್ತು ಪೊಲೀಸ್ ಠಾಣೆಗಳಿಗೆ ಕೆಲವು ನಿರ್ದೇಶನಗಳನ್ನೂ ಹೈಕೋರ್ಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.