High Court: ಮಹಿಳೆ ಅಪಹರಣ ಕೇಸ್; ಎಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ
Team Udayavani, Sep 19, 2024, 8:48 PM IST
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ತಮ್ಮ ವಿರುದ್ಧದ ಎಫ್ಐಆರ್ ರದ್ದುಕೋರಿ ಪ್ರಕರಣದ ಮೊದಲನೇ ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಇದೇ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿರುವ ಮತ್ತೂಂದು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.27ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.