Higher Education: ಸರಕಾರಿ ವೃತ್ತಿಪರ ಕಾಲೇಜುಗಳಿಗೆ ಸೌಕರ್ಯ, ಬ್ರ್ಯಾಂಡಿಂಗ್ ಕೊರತೆ
ಉನ್ನತ ಶಿಕ್ಷಣ ಪರಿಷತ್‌ನ ವರದಿಯಲ್ಲಿ ತಾಂತ್ರಿಕ ಸಮಸ್ಯೆಗಳ ಉಲ್ಲೇಖ ಕಾಲೇಜುಗಳ "ಉತ್ಕೃಷ್ಟತೆ'ಗೆ ಸಮಗ್ರ ವರದಿ ಸಲ್ಲಿಕೆ
Team Udayavani, Aug 26, 2024, 7:00 AM IST
ಬೆಂಗಳೂರು: ರಾಜ್ಯದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಬೋಧಕರ ಕೊರತೆ, ಮೂಲ ಸೌಕರ್ಯದ ಅಲಭ್ಯತೆ, ಬ್ರ್ಯಾಂಡಿಂಗ್‌ನ ಪರಿಕಲ್ಪನೆ ಇಲ್ಲದಿರುವಿಕೆ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯವಾದ ಯೋಜನೆಗಳ ಕೊರತೆಯಿಂದ ಬಳಲುತ್ತಿದೆ ಎಂದು ಉನ್ನತ ಶಿಕ್ಷಣ ಪರಿಷತ್‌ನ ವರದಿಯೊಂದು ಹೇಳಿದೆ. ಹಾಗೆಯೇ ರಾಜ್ಯದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಉತ್ಕೃಷ್ಟತಾ ಕೇಂದ್ರಗಳನ್ನಾಗಿ ರೂಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಿದೆ.
ರಾಜ್ಯದಲ್ಲಿ ನೀಟ್ ಮೂಲಕ ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟ್ ಪಡೆದು ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಓದಲು ಆದ್ಯತೆ ನೀಡುತ್ತಾರೆ. ಅದೇ ಎಂಜಿನಿಯರಿಂಗ್‌ನಲ್ಲಿ ಸಿಇಟಿ ಮೂಲಕ ಸರಕಾರಿ ಕೋಟಾದಲ್ಲಿ ಎಂಜಿನಿಯರಿಂಗ್ ಸೀಟ್ ಪಡೆಯುವ ವಿದ್ಯಾರ್ಥಿಗಳ ಮೊದಲ ಆದ್ಯತೆ ಖಾಸಗಿ ಕಾಲೇಜ್‌ಗಳಾಗಿರುತ್ತವೆ.
ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ| ಎಂ. ಸಿ. ಸುಧಾಕರ್ ಅವರ ಸೂಚನೆಯ ಮೇರೆಗೆ ರಚನೆಯಾದ ಉನ್ನತ ಶಿಕ್ಷಣ ಪರಿಷತ್‌ನನ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಕೆ.ಜಿ. ಚಂದ್ರಶೇಖರ್ ನೇತೃತ್ವದ ಸಮಿತಿಯು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸಾಮರ್ಥ್ಯ ವೃದ್ಧಿ; ಸವಾಲುಗಳು ಮತ್ತು ತಂತ್ರಗಳು’ ಎಂಬ ವರದಿಯನ್ನು ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದೆ.
ಸರಕಾರಿ ಕಾಲೇಜುಗಳ ಕೊರತೆ ಏನು?:
ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ಸರಕಾರಿ ಕಾಲೇಜುಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬಂದಿ ತೀವ್ರ ಕೊರತೆಯಿದೆ. ಎಂಜಿನಿಯರಿಂಗ್ ಕಲಿಕೆಗೆ ಅಗತ್ಯವಾದ ಉಪಕರಣಗಳು ಲಭ್ಯವಿಲ್ಲ, ಕಾಲೇಜುಗಳ ಬ್ರ್ಯಾಂಡಿಂಗ್ ಕಳಪೆಯಾಗಿದ್ದು ಸಂಸ್ಥೆಗಳು ಕಣ್ಣಿಗೆ ಕಾಣುತ್ತಿಲ್ಲ. ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರ ವ್ಯವಸ್ಥಿತವಾಗಿಲ್ಲ, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ನೀತಿ ನಿರ್ಧಾರಗಳು ಕಠಿನವಾಗಿದ್ದು ಅವುಗಳ ಮರು ಪರಿಶೀಲನೆ ನಡೆಯಬೇಕು. ನೇಮಕಾತಿ ಮತ್ತು ವರ್ಗಾವಣೆ ನೀತಿಯಲ್ಲಿ ಬದಲಾವಣೆ ಅಗತ್ಯ ಎಂದು ವರದಿ ಹೇಳಿದೆ.
ಸರಕಾರಿ ಕಾಲೇಜುಗಳಲ್ಲಿ ಬೋಧನಾ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ರಾಜ್ಯ ಸರಕಾರದ ಎಲ್ಲ ಇಲಾಖೆಗಳ ಪಾಲುದಾರಿಕೆ ಮತ್ತು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು, ಸಂಸ್ಥೆಯ ಉನ್ನತ ಅಧಿಕಾರಿಗಳು ಮತ್ತು ಸರಕಾರದ ನೀತಿ ನಿರೂಪಕರ ಮಧ್ಯೆ ನಿರಂತರ ಸಮಾಲೋಚನೆ ನಡೆಯಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
ಶುಲ್ಕ ಹೆಚ್ಚಳಕ್ಕೂ ಶಿಫಾರಸು?
ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಉತ್ಕೃಷ್ಟತಾ ಕೇಂದ್ರಗಳನ್ನಾಗಿಸಲು ಕೆಲ ಅಲ್ಪ-ದೀರ್ಘಕಾಲೀನ ಯೋಜನೆಗಳನ್ನು ಹಾಕಿಕೊಳ್ಳಬೇಕು. ಕಡಿಮೆ ಶುಲ್ಕ ಸಂರಚನೆ ಅನುಕೂಲಕರವಾಗಿದ್ದರೂ ಮುಂದಿನ ದಿನಗಳಲ್ಲಿ ಮುಂದುವರಿಯಬಾರದು ಎಂದು ವರದಿಯಲ್ಲಿ ಹೇಳಲಾಗಿದೆ. ವಿಟಿಯು ಪಠ್ಯದ ಜತೆಗೆ ಹೆಚ್ಚುವರಿ ಕೋರ್ಸ್‌ಗಳನ್ನು ಪರಿಚಯಿಸಬೇಕು, ಉದ್ದಿಮೆಗಳ ತಜ್ಞರನ್ನು ಬಳಸಿ ತಂತ್ರಜ್ಞಾನದಲ್ಲಿ ತರಬೇತಿ, ಹೆಚ್ಚು ಪರೀಕ್ಷಾ ಕೇಂದ್ರ ಮತ್ತು ಇನ್ ಕ್ಯುಬೇಟರ್ ಸೆಂಟರ್‌ಗಳ ಸ್ಥಾಪನೆ, ವಿದ್ಯಾರ್ಥಿಗಳಿಗೆ ಫಿನಿಶಿಂಗ್ ಸ್ಕೂಲ್ ಕಾರ್ಯಕ್ರಮ ಜಾರಿಗೊಳಿಸುವುದು ಸೇರಿ ಇ ತರ ಶಿಫಾರಸನ್ನು ವರದಿಯಲ್ಲಿ ನೀಡಲಾಗಿದೆ.
ಈ ವರದಿ ಇನ್ನೂ ನನ್ನ ಕೈಸೇರಿಲ್ಲ. ವರದಿ ಸಿಕ್ಕಿದ ತತ್‌ಕ್ಷಣ ಶಿಫಾರಸು ಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಇದೇ ಮಾದರಿಯಲ್ಲಿ ಪಾಲಿಟೆಕ್ನಿಕ್ ಕಾಲೇಜು ಗಳ ಬಗ್ಗೆಯೂ ವರದಿಯ ತಯಾರಿಸಲು ಸೂಚಿಸಿದ್ದು ಎಲ್ಲ ವರದಿಗಳು ಕೈ ಸೇರಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು. -ಡಾ| ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಇಲಾಖೆ ಸಚಿವ
– ರಾಕೇಶ್ ಎನ್. ಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.