ಹಿಜಾಬ್ ಪ್ರಕರಣ: ವಿದ್ಯಾರ್ಥಿಗಳಿಗೆ ಸರಕಾರದ ಮಾರ್ಗಸೂಚಿ ಮನವರಿಕೆ ಮಾಡುವ ಪ್ರಯತ್ನ
Team Udayavani, Feb 8, 2022, 6:15 AM IST
ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಜಿಲ್ಲಾಡಳಿತದಿಂದ ವಿವರಣೆ ಕೋರಿದ್ದರ ನಡುವೆಯೇ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಕುರಿತ ಸರಕಾರದ ಮಾರ್ಗಸೂಚಿಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವ ಪ್ರಯತ್ನ ಸೋಮವಾರ ನಡೆದಿದೆ.
ಈ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸುವುದಾಗಿ ಹೇಳಿತು. ಮುನ್ಸೂಚನೆ ಅರಿತ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನಷ್ಟನ್ನೇ ಧರಿಸಬೇಕು ಎಂಬುದನ್ನು ವಿವರಿಸಿತು. ವಿದ್ಯಾರ್ಥಿನಿಯರಿಗೂ ಸರಕಾರದ ಮಾರ್ಗಸೂಚಿ ಬಗ್ಗೆ ಮನವರಿಕೆ ಮಾಡಿ ಕಾಲೇಜಿಗೆ ಮಧ್ಯಾಹ್ನ ಅನಂತರ ರಜೆ ನೀಡಲಾಯಿತು. ಮಂಗಳವಾರ ಪ್ರ್ಯಾಕ್ಟಿಕಲ್ ತರಗತಿಯಷ್ಟೇ ಇರಲಿದೆ ಎಂದು ಎಂಜಿಎಂ ಪ. ಪೂ. ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಮುಂಜಾಗ್ರತೆ ಹಿನ್ನೆಲೆಯಲ್ಲಿ ಮೀಸಲು ಪೊಲೀಸ್ ತುಕಡಿಯನ್ನು ಕಾಲೇಜಿನ ಸಮೀಪ ನಿಯೋಜಿಸಲಾಗಿತ್ತು.
ಸೋಮವಾರ ಸಹಬಾಳ್ವೆ ಸಂಘಟನೆ ವತಿಯಿಂದ ಶಾಂತಿ ಕದಡುವ ಪ್ರಯತ್ನ ಮಾಡುವ ಶಕ್ತಿಗಳ ವಿರುದ್ಧ ಕ್ರಮ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ನಗರದ ಹುತಾತ್ಮ ಸ್ಮಾರಕದ ಬಳಿ ಸಿಎಫ್ಐ ನೇತೃತ್ವದಲ್ಲಿ ಹಲವು ಮುಸ್ಲಿಂ ಮಹಿಳೆಯರು ಸರಕಾರದ ಧೋರಣೆ ಖಂಡಿಸಿ ಪ್ರತಿಭಟಿಸಿದರು.
ಹಿಜಾಬ್ ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಉಡುಪಿ ಹೆಸರು ಅನಗತ್ಯ ಕಾರಣಕ್ಕೆ ಮುನ್ನೆಲೆಗೆ ತಂದಿದೆ. ರಾಷ್ಟ್ರೀಯ ಮಾಧ್ಯಮಗಳೂ ಈ ಸುದ್ದಿಯತ್ತಲೇ ಗಮನ ಕೇಂದ್ರೀಕರಿಸಿವೆ.
ಪ್ರಾಂಶುಪಾಲರ ಸ್ಪಷ್ಟನೆ
ಹಿಜಾಬ್ ವಿವಾದ ಹುಟ್ಟಿಕೊಂಡ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರುದ್ರೆಗೌಡ ಅವರು ಹೇಳುವಂತೆ, ಕಾಲೇಜಿನಲ್ಲಿರುವ 1 ಸಾವಿರ ವಿದ್ಯಾರ್ಥಿನಿಯರ ಪೈಕಿ ಪ್ರೌಢಶಾಲೆಯಲ್ಲಿ 25 ಮತ್ತು ಪಿಯುಸಿಯಲ್ಲಿ 75 ಮಂದಿ ಮುಸ್ಲಿಂ ಸಮುದಾಯದವರು ಕಲಿಯುತ್ತಿದ್ದಾರೆ. ಎರಡು ತಿಂಗಳ ಈಚೆಗೆ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಆರಂಭಿಸಿದರು. ಕೂಡಲೇ ಪೋಷಕರನ್ನು ಕರೆದು ಕೆಲವು ಸಭೆ ನಡೆಸಿ ವಿವರಿಸಲಾಯಿತು. ಆ ಬಳಿಕ ನಾಲ್ವರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸುತ್ತಿದ್ದಾರೆ ಎಂದಿದ್ದಾರೆ. ಇದಲ್ಲದೇ ಆರಂಭದಲ್ಲೇ ವಸ್ತ್ರಸಂಹಿತೆಯನ್ನು ಎಲ್ಲ ವಿದ್ಯಾರ್ಥಿಗಳೂ ಒಪ್ಪಿಕೊಂಡಿರುವ ಬಗ್ಗೆ ದಾಖಲೆಯನ್ನು ಕಾಲೇಜಿನ ಕಡೆಯಿಂದ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.