ಅನಾರೋಗ್ಯ ವದಂತಿ ತಳ್ಳಿ ಹಾಕಿದ ಗೃಹ ಸಚಿವ ಅಮಿತ್ ಶಾ
Team Udayavani, May 10, 2020, 6:10 AM IST
ಹೊಸದಿಲ್ಲಿ: ಆರೋಗ್ಯವಾಗಿದ್ದೇನೆ. ಯಾವುದೇ ರೀತಿಯ ರೋಗ ನನ್ನನ್ನು ಬಾಧಿಸಿಲ್ಲ…ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಸ್ಪಷ್ಟನೆ.
ತನ್ನನ್ನು ಅನಾರೋಗ್ಯ ಪೀಡಿಸುತ್ತಿದೆ ಎಂಬ ಬಗ್ಗೆ ಇತ್ತೀಚೆಗಿನ ದಿನಗಳಲ್ಲಿ ತೇಲಿಬಂದಿರುವ ವದಂತಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಗೃಹ ಸಚಿವನಾಗಿ ನಾನು ದೇಶ ಎದುರಿಸುತ್ತಿರುವ ಕೋವಿಡ್-19 ಪರಿಸ್ಥಿತಿಯಲ್ಲಿ ಹಗಲಿರುಳೂ ದುಡಿಯುತ್ತಿದ್ದೇನೆ. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಅನಾರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ನನಗೆ ಶ್ರದ್ಧಾಂಜಲಿಯನ್ನೂ ಸಲ್ಲಿಸಿದ್ದಾರೆ. ಇವೆಲ್ಲವೂ ಸತ್ಯಕ್ಕೆ ದೂರವಾದ ವಿಚಾರಗಳು. ಇಂದು ಈ ಬಗ್ಗೆ ಸ್ಪಷ್ಟನೆ ನೀಡಬಯಸುತ್ತೇನೆ. ನನಗೆ ಯಾವುದೇ ರೀತಿಯ ಅನಾರೋಗ್ಯ ಇಲ್ಲ. ನಾನು ಆರೋಗ್ಯದಿಂದ ಇದ್ದೇನೆ ಎಂದು ಶಾ ಹೇಳಿದ್ದಾರೆ.
ವದಂತಿ ಹರಡಿದವರಿಗೆ ಚಾಟಿ
ಹಿಂದೂ ನಂಬಿಕೆಗಳ ಪ್ರಕಾರ ಇಂಥ ವದಂತಿಗಳಿಂದ ವ್ಯಕ್ತಿಯ ಆರೋಗ್ಯ ಹೆಚ್ಚುತ್ತದೆ. ಹೀಗಾಗಿ ಸ್ಪಷ್ಟನೆ ನೀಡಿರ ಲಿಲ್ಲ. ಆದರೆ ನನ್ನ ಮೇಲೆ ಅಭಿಮಾನವಿರಿಸಿದ ಕಾರ್ಯ ಕರ್ತರು ಆತಂಕಕ್ಕೆ ಒಳಗಾದ್ದರಿಂದ ಸ್ಪಷ್ಟನೆ ನೀಡ ಬೇಕಾಯಿತು ಎಂದು ಶಾ ಚಾಟಿ ಯೇಟು ಬೀಸಿದ್ದಾರೆ.
ನಾಲ್ವರ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದಲ್ಲಿ ಅಹ್ಮದಾಬಾದ್ನ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಅಮಿತ್ ಶಾ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಅವರ ಅನಾರೋಗ್ಯದ ಬಗ್ಗೆ ವದಂತಿ ಹರಡಿದ್ದರು. ತನಿಖೆ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಹ್ಮದಾಬಾದ್ ಪೊಲೀಸ್ ವಿಶೇಷ ಆಯುಕ್ತ ಅಜಯ್ ತೋಮರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.