ಗೃಹಜ್ಯೋತಿ; ಗ್ರಾಹಕರಿದ್ದಲ್ಲಿಗೆ ತೆರಳಿ ನೋಂದಣಿ?
- ನೋಂದಣಿ ಮಂದಗತಿ ಹಿನ್ನೆಲೆ ಸರಕಾರದ ಈ ಚಿಂತನೆ
Team Udayavani, Jul 10, 2023, 7:15 AM IST
ಬೆಂಗಳೂರು: ಪ್ರಸ್ತುತ ಜನರು ಹತ್ತಿರದ ಸೇವಾ ಕೇಂದ್ರಗಳಿಗೆ ತೆರಳಿ “ಗೃಹಜ್ಯೋತಿ”ಗೆ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ಮುಂದೆ ಗ್ರಾಹಕರು ಇದ್ದಲ್ಲಿಗೆ ವಿದ್ಯುತ್ ಸರಬರಾಜು ಕಂಪೆನಿ (ಎಸ್ಕಾಂ)ಗಳು ತೆರಳಿ ನೋಂದಣಿ ಮಾಡಿಕೊಳ್ಳಲಿವೆ.
“ಗೃಹಜ್ಯೋತಿ’ಗಾಗಿ ಜೂ. 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಸ್ಕಾಂ ಕಚೇರಿಗಳಲ್ಲೂ ಈ ಸೇವೆ ಒದಗಿಸಲಾಗುತ್ತಿದೆ. ಮುಂದೆ ಅಗತ್ಯಬಿದ್ದರೆ ಗ್ರಾಹಕರಿದ್ದಲ್ಲಿಗೆ ಹೋಗಿ ಹೆಸರು ನೋಂದಾಯಿಸಿಕೊಳ್ಳಲು ಎಸ್ಕಾಂಗಳು ಚಿಂತನೆ ನಡೆಸಿವೆ.
ನೋಂದಣಿ ಪ್ರಕ್ರಿಯೆ ಆರಂಭಗೊಂಡು 22 ದಿನಗಳಾಗಿದ್ದು, ಆರಂಭದಲ್ಲಿ ನಿತ್ಯ 6ರಿಂದ 8 ಲಕ್ಷ ಜನ ಅರ್ಜಿ ಸಲ್ಲಿಸುತ್ತಿದ್ದರು. ಆದರೆ ಆರೆಂಟು ದಿನಗಳಿಂದ ನೀರಸವಾಗಿದ್ದು, 1.5ರಿಂದ 2 ಲಕ್ಷಕ್ಕೆ ಸೀಮಿತಗೊಂಡಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಹೆಸರು ನೋಂದಾಯಿಸಿಕೊಂಡಿಲ್ಲ. ಇದೇ ಗತಿಯಲ್ಲಿ ಸಾಗಿದರೆ ಇಡೀ ರಾಜ್ಯದ ಗ್ರಾಹಕರು ಯೋಜನೆ ವ್ಯಾಪ್ತಿಗೆ ಬರಲು ಇನ್ನೂ ಕನಿಷ್ಠ ಎರಡು ತಿಂಗಳು ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನೀರಸ ಪ್ರತಿಕ್ರಿಯೆ ಇರುವ ಕಡೆಗಳಿಗೆ ತೆರಳಿ ನೋಂದಣಿ ಮಾಡುವ ಬಗ್ಗೆ ಯೋಚನೆ ನಡೆದಿದೆ.
1.02 ಕೋಟಿ ಮಂದಿ ನೋಂದಣಿ
ಇರುವ 2.15 ಕೋಟಿ ಗೃಹ ಬಳಕೆದಾರರ ಪೈಕಿ ಈವರೆಗೆ ಸುಮಾರು 1.02 ಕೋಟಿ ಮಂದಿ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ನಗರ ಪ್ರದೇಶದ ನಿವಾಸಿಗಳ ಪ್ರಮಾಣ ಹೆಚ್ಚಿದೆ. ಅಂಕಿಅಂಶಗಳನ್ನು ಪರಿಶೀಲಿಸಿ, ಯಾವ ವರ್ಗ ಮತ್ತು ಪ್ರದೇಶದಲ್ಲಿ ಸ್ಪಂದನೆ ಕಡಿಮೆ ಇದೆ ಎಂಬುದನ್ನು ನೋಡಿಕೊಂಡು, ಅಲ್ಲಿ ಮನೆ ಮನೆ ಸಮೀಕ್ಷೆ ಅಥವಾ ನಿರ್ದಿಷ್ಟ ಪ್ರದೇಶದಲ್ಲಿ ಸೇವಾ ಕೇಂದ್ರ ತೆರೆದು, ಪರಿಣಾಮಕಾರಿಯಾಗಿ ನೋಂದಣಿ ಪ್ರಕ್ರಿಯೆ ಕೈಗೊಳ್ಳುವ ಉದ್ದೇಶ ಇದೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಗತ್ಯಬಿದ್ದರೆ ಮನೆಗೇ ಭೇಟಿ
ಕೊನೆಯ ದಿನಾಂಕ ನಿಗದಿಪಡಿಸದಿರುವುದರಿಂದ ಸಾಕಷ್ಟು ಸಮಯ ಇದೆ. ಅವಕಾಶ ಸಿಕ್ಕಾಗ ಗ್ರಾಹಕರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗಗಳಲ್ಲಿ ಇದರ ಬಗ್ಗೆ ಅರಿವಿಲ್ಲದ, ಗೊತ್ತಿದ್ದರೂ ನೋಂದಣಿ ಮಾಡಿಕೊಳ್ಳಲಾಗದ ಅಥವಾ ಸಾಧ್ಯವಾಗದ ವರ್ಗಗಳನ್ನು ತಲುಪುವ ಆವಶ್ಯಕತೆ ಇದೆ. ಅಗತ್ಯ ಬಿದ್ದರೆ ಗ್ರಾಹಕರಿದ್ದಲ್ಲಿಯೇ ನಮ್ಮ ಮೀಟರ್ ರೀಡರ್‌ಗಳು ಅಥವಾ ಗ್ರಾಮ ವಿದ್ಯುತ್ ಪ್ರತಿನಿಧಿಗಳು ತೆರಳಿ, ನೋಂದಣಿ ಮಾಡಿಸಿಕೊಳ್ಳಲಿದ್ದಾರೆ ಎಂದು ಬೆಸ್ಕಾಂ ನಿರ್ದೇಶಕ (ಹಣಕಾಸು) ಜೆ. ದರ್ಶನ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಒಬ್ಬ ಮೀಟರ್ ರೀಡರ್ ಒಂದು ದಿನಕ್ಕೆ 250 ಮನೆಗಳ ರೀಡಿಂಗ್ ಮಾಡುತ್ತಾರೆ. ಹತ್ತು ದಿನಗಳಲ್ಲಿ ಒಬ್ಬ ಸಿಬಂದಿ 2,500 ಮನೆಗಳನ್ನು ಸಂಪರ್ಕಿಸುತ್ತಾರೆ. ಅಗತ್ಯ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು. ಇನ್ನಷ್ಟು ಜಾಹಿರಾತುಗಳನ್ನು ನೀಡುವ ಮೂಲಕ ಜನರನ್ನು ತಲುಪುವ ಕೆಲಸವೂ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ವಿಜಯಕುಮಾರ ಚಂದರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.