Question Paper;ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 1 ಕೋಟಿ ದಂಡ:ಅಕ್ರಮ ತಡೆ ಕಾಯ್ದೆ ಜಾರಿ
ನೀಟ್ ಕೌನ್ಸೆಲಿಂಗ್‌ಗೆ ತಡೆಯಾಜ್ಞೆ ನೀಡಲ್ಲ: ಸುಪ್ರೀಂ
Team Udayavani, Jun 22, 2024, 10:27 AM IST
ನವದೆಹಲಿ: ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆ ಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳನ್ನು ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ(ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿ ಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್, ಎನ್‌ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
ಇದನ್ನೂ ಓದಿ:Kamala Hampana: ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ!
ಕಾಂಗ್ರೆಸ್ ಪ್ರತಿಭಟನೆ: ನೀಟ್, ನೆಟ್ ಪರೀಕ್ಷಾ ಅಕ್ರಮ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ಕಾಂಗ್ರೆಸ್, ಶುಕ್ರವಾರ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸಿದೆ.
ಯೋಗ ಕಾರ್ಯಕ್ರಮಕ್ಕೆ ಸಚಿವ ಪ್ರಧಾನ್ ಗೈರು!:
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ದೆಹಲಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಯ ಬಿಸಿ ತಟ್ಟಿದ ಪ್ರಸಂಗ ನಡೆದಿದೆ. ಶುಕ್ರವಾರ ಪ್ರಧಾನ್ ಅವರು ದೆಹಲಿ ವಿವಿಯ ಯೋಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗ ವಹಿಸಬೇಕಾಗಿತ್ತು.
ನೀಟ್ ಕೌನ್ಸೆಲಿಂಗ್‌ಗೆ ತಡೆಯಾಜ್ಞೆ ನೀಡಲ್ಲ: ಸುಪ್ರೀಂಕೋರ್ಟ್ ಸ್ಪಷ್ಟನೆ
ಅಕ್ರಮ ಹಿನ್ನೆಲೆಯಲ್ಲಿ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆಯಾಜ್ಞೆ ತರಬೇಕು ಎಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿ ಹಾಕಿದೆ.
ಕೌನ್ಸೆಲಿಂಗ್ ಆರಂಭಿಸಿ, ನಿಲ್ಲಿಸುವ ಪ್ರಕ್ರಿಯೆ ಇಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ವಿಚಾರಣೆ ಜು.8ಕ್ಕೆ ಮುಂದೂಡಿರುವ ಕಾರಣ, ಜು.6ರಿಂದ ಆರಂಭವಾಗಲಿರುವ ಕೌನ್ಸೆಲಿಂಗ್ ಅನ್ನು 2 ದಿನ ತಡವಾಗಿ ಆರಂಭಿಸಬಹುದಲ್ಲವೇ ಎಂದು
ಅರ್ಜಿದಾರರ ಪರ ವಕೀಲರು ಕೇಳಿಕೊಂಡರು. ಆದರೆ, ನ್ಯಾಯಪೀಠ ಅದಕ್ಕೆ ಒಪ್ಪಲಿಲ್ಲ
ಮರು ಪರೀಕ್ಷೆ ಪ್ರವೇಶಪತ್ರ ಬಿಡುಗಡೆ:6 ಕೇಂದ್ರ ಬದಲು
ಕೃಪಾಂಕ ಪಡೆದ 1563 ವಿದ್ಯಾರ್ಥಿಗಳಿಗಾಗಿ ನೀಟ್-ಯುಜಿ ಮರುಪರೀಕ್ಷೆ ಭಾನುವಾರ ನಡೆಯಲಿದ್ದು, ಅಡ್ಮಿಟ್ ಕಾರ್ಡ್ ಗಳನ್ನು ಶುಕ್ರವಾರವೇ ಬಿಡುಗಡೆ ಮಾಡಲಾಗಿದೆ. ಜತೆಗೆ ಈ ಅಭ್ಯರ್ಥಿಗಳು ಕಳೆದ ಬಾರಿ ಬರೆದಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಿಸಿ, 6 ಹೊಸ ಕೇಂದ್ರಗ ಳಲ್ಲಿಪರೀಕ್ಷೆ ನಡೆಸಲಾಗುತ್ತದೆ ಎಂದು ಎನ್ ಟಿಎ ಹೇಳಿದೆ. ಮೇಘಾಲಯ, ಹರ್ಯಾಣ, ಛತ್ತೀಸ್ ಗಢ, ಗುಜರಾತ್, ಚಂಡೀಗಢದಲ್ಲಿ ಕಳೆದ ಬಾರಿ ಪರೀಕ್ಷೆ ನಡೆಸಲಾಗಿತ್ತು.
ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 43 ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಬಿಜೆಪಿ
ಆಡಳಿತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಯೆಂಬುದು ದೇಶದ ರಾಷ್ಟ್ರೀಯ ಸಮಸ್ಯೆಯಾಗಿ ಬದಲಾಗಿದೆ. ಸರ್ಕಾರವು ಈವರೆಗೆ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ.
●ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್ ನಾಯಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.