Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
ಹಳೇ ಹುಬ್ಬಳ್ಳಿ ಆನಂದನಗರ ಬಳಿ ದುರ್ಘಟನೆ, ಮತ್ತೊಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
Team Udayavani, Jan 1, 2025, 3:40 PM IST
ಹುಬ್ಬಳ್ಳಿ: ಸುಲಿಗೆಕೋರನೊಬ್ಬ ತನ್ನ ಸಹಚರರೊಂದಿಗೆ ಕ್ಷುಲ್ಲಕ ವಿಚಾರವಾಗಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಹಳೇ ಹುಬ್ಬಳ್ಳಿ ಆನಂದನಗರ ಘೋಡ್ಕೆ ಫ್ಲಾಟ್ ನಿವಾಸಿ ಸಮೀರ ಶೇಖ್ (19) ಮೃತಪಟ್ಟಿದ್ದಾರೆ. ಮಕ್ಕಳ ಜಗಳದ ವಿಷಯವಾಗಿ ಹಾಗೂ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮುಜಾಮಿಲ್ ಎಂಬಾತನೇ ತನ್ನ ಸಹಚರರೊಂದಿಗೆ ಸೇರಿ ಸೋಮವಾರ ರಾತ್ರಿ ಘೋಡ್ಕೆ ಫ್ಲಾಟ್ನ ತಬ್ಲಿಕ್ ಮಸೀದಿ ಬಳಿ ಸಮೀರ ಶೇಖ್ (19) ಹಾಗೂ ಈತನ ಚಿಕ್ಕಪ್ಪ ಜಾವೀದ್ ಶೇಖ್ (32) ಇವರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದ. ಈ ವೇಳೆ ಸಮೀರನ ಹೊಟ್ಟೆಗೆ ಚಾಕು ಇರಿದಿದ್ದರಿಂದ ಕಿಡ್ನಿಗೆ ಹೊಡೆತ ಬಿದ್ದು ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡಿದ್ದರು.
ಕೆಎಂಸಿಆರ್ಐ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮೀರ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈತನ ಚಿಕ್ಕಪ್ಪ ಜಾವೀದ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.