ಹುಬ್ಬಳ್ಳಿ :ಪ್ರತಿಭಟನೆ ವೇಳೆ ಕುಲಪತಿಗಳ ಮೇಲೆ ಮಸಿ :ವಿದ್ಯಾರ್ಥಿ ಮುಖಂಡ ಸೇರಿ ಹಲವರು ವಶಕ್ಕೆ
Team Udayavani, Jan 5, 2022, 5:32 PM IST
ಹುಬ್ಬಳ್ಳಿ: ಕಾನೂನು ಪದವಿ ವಿದ್ಯಾರ್ಥಿಗಳ ಬೇಡಿಕೆಗೆ ಸರಕಾರ, ಕುಲಪತಿ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ಕಾನೂನು ವಿವಿ ಕುಲಪತಿ ಮೇಲೆ ಮಸಿ ಎರಚಿದ ಘಟನೆ ಬುಧವಾರ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೂ ಮಸಿ ಬಿದ್ದಿದ್ದು ಘಟನೆ ತೀವ್ರ ರೂಪ ಪಡೆಯುತ್ತಿದ್ದಂತೆ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರತಿಭಟನಾ ನಿರತರನ್ನು ಚದುರಿಸಿದರು.
ಬುಧವಾರ ಮಧ್ಯಾಹ್ನ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕುಲಪತಿ ಪ್ರೊ| ಈಶ್ವರ ಭಟ್ಟ ಅವರು ಆಗಮಿಸಿದ್ದು ವಿದ್ಯಾರ್ಥಿಗಳ ಬೇಡಿಕೆಗಳು ಕುರಿತು ಮಾತನಾಡಿದ ಕುಲಪತಿಗಳು, ವಿಶ್ವವಿದ್ಯಾಲಯದ ನಿಯಮಗಳನ್ನು ಬಿಟ್ಟು ಯಾವುದೇ ಕಾರಣಕ್ಕೂ ನಿರ್ಣಯ ಕೈಗೊಳ್ಳಲು ಬರುವುದಿಲ್ಲ. ಕೆಲ ಬೇಡಿಕೆ ಈಡೇರಿಸಲು ಸಮಯ ಬೇಕಾಗುತ್ತದೆ. ಕಾನೂನು ಪದವಿ ವೃತ್ತಿಪರ ಕೋರ್ಸ್ ಆಗಿರುವುದರಿಂದ ಆನ್‌ಲೈನ್ ಪರೀಕ್ಷೆ ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದರು. ಇದರ ನಡುವೆ ವಿದ್ಯಾರ್ಥಿಯೊಬ್ಬ ಆರಂಭದಿಂದಲೂ ಇದೇ ಉತ್ತರವನ್ನು ನೀಡುತ್ತಿದ್ದೀರಿ ಎಂದು ಕೋಪಗೊಂಡು ಮಸಿ ಎರಚಿದ್ದಾನೆ. ಈ ವೇಳೆ ಕುಲಪತಿಗಳ ಪಕ್ಕದಲ್ಲೇ ಇದ್ದ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಮಸಿ ಬಿದ್ದಿದೆ ಇದರಿಂದ ಗೊಂದಲ ನಿರ್ಮಾಣವಾಗಿ ವಿದ್ಯಾರ್ಥಿ ಮುಖಂಡರನ್ನು ಪೊಲೀಸ್‌ರು ವಶಕ್ಕೆ ಪಡೆದು ಉಳಿದ ವಿದ್ಯಾರ್ಥಿಗಳನ್ನು ಚದುರಿಸಿದ ಘಟನೆ ನಡೆಯಿತು.
ಇದನ್ನೂ ಓದಿ :ಜೀವಂತವಾಗಿ ಬಂದಿದ್ದೇನೆ…ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ-ಮೋದಿ
ಕಳೆದ ಒಂದು ತಿಂಗಳಿನಿಂದ ಆನ್‌ಲೈನ್ ಮೌಲ್ಯಮಾಪನದಂತೆ ಆನ್‌ಲೈನ್ ಪರೀಕ್ಷೆ ನಡೆಸುವುದು, ಮೂರು ವರ್ಷದ ಪದವಿ ವಿದ್ಯಾರ್ಥಿಗಳಿಗೆ ನೀಡಿದಂತೆ 5 ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆಯಿಲ್ಲದ ಮಾರ್ಗಸೂಚಿಯ ಪ್ರಕಾರ ಮುಂದಿನ ಸೆಮಿಸ್ಟರ್‌ಗೆ ಪಾಸ್ ಮಾಡಬೇಕು ಎಂಬುವುದು ವಿದ್ಯಾರ್ಥಿಗಳ ಬೇಡಿಕೆಯಾಗಿತ್ತು. ಸರಕಾರ ಹಾಗೂ ವಿಶ್ವವಿದ್ಯಾಲಯದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಬೃಹತ್ ಹೋರಾಟ ಆಯೋಜಿಸಿ, ರಾಜ್ಯದ ವಿವಿಧ ಭಾಗಗಳಿಂದ ಕಾನೂನು ಪದವಿ ವಿದ್ಯಾರ್ಥಿಗಳು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.