Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
ಕೆಎಸ್‌ಬಿಸಿಎಲ್‌ನಿಂದ ದಾಖಲೆಯ ಪ್ರಮಾಣದ ಮದ್ಯ ಮಾರಾಟ, ಕೋಟಿ ಕೋಟಿ ಗಳಿಕೆ
Team Udayavani, Jan 1, 2025, 2:44 PM IST
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯು ರಾಜ್ಯ ಸರಕಾರಕ್ಕೆ (ಅಬಕಾರಿ ಇಲಾಖೆ) ಭರ್ಜರಿ ಆದಾಯ ಹರಿದು ಬಂದಿದೆ. ಮಂಗಳವಾರ ಒಂದೇ ದಿನದಲ್ಲಿ ಕೆಎಸ್‌ಬಿಸಿಎಲ್ (ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ)ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟವಾಗಿದೆ.
ಈ ಬಾರಿ ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ರಾಜ್ಯದಲ್ಲಿ ಡಿ.31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದಲ್ಲೇ ಕೆಎಸ್‌ಬಿಸಿಎಲ್‌ಯಿಂದ ಬರೋಬ್ಬರಿ 308 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿ.31ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿ.31 ರಂದು 7,305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್‌ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ.
ಎರಡು ದಿನ ಮೊದಲೇ ಸಂಗ್ರಹ ಆರಂಭ:
ಶುಕ್ರವಾರದಂದು (ಡಿ.27) ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದು ಬಂದಿತ್ತು.
ಹೊಸ ವರ್ಷ ಸ್ವಾಗತ, ಸಂಭ್ರಮಾಚರಣೆ:
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.