ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ : ಕಾರು ಸಹಿತ 34 ಲಕ್ಷದ 342 ಕೆ.ಜಿ ಗಾಂಜಾ ವಶ
Team Udayavani, Jan 30, 2022, 8:15 PM IST
ಹುಮನಾಬಾದ್ : ಬೀದರ್ ಕಡೆಯಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸರು ದಾಳಿ ನಡೆಸಿ 34 ಲಕ್ಷ ಮೌಲ್ಯದ 342 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಒಂದು ಕಾರಿನಲ್ಲಿ ನಾಲ್ಕು ಜನರು ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾರನ್ನು ಅಡ್ಡಾಡಿಸಿಕೊಂಡು ಸಿನಿಮಿಯ ರೀತಿಯಲ್ಲಿ ಪೊಲೀಸರು ಕಾರ್ಯಚರಣೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ರವಿವಾರ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಮೂರು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಒಬ್ಬ ಆರೋಪಿ 6 ಲಕ್ಷದ ಕಾರು ಹಾಗೂ ಕಾರಿನಲ್ಲಿದ್ದ 343 ಕೆಜಿ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎಸ್.ಪಿ ಡೆಕ್ಕಾ ಕಿಶೋರ ಬಾಬು, ಡಿವೈಎಸ್ಪಿ ಸೋಮಲಿಂಗ ಕುಂಬಾರ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಹ್ಮದ್ ಗೌಸ್, ಭಗವಾನ, ದೀಪಕ, ರಮೇಶ, ಶಿವಾನಂದ, ಪಾಂಡುರಂಗ, ಮಲ್ಲಪ್ಪಾ, ಸಂಜೀವ, ಸಂತೋಷ,ಸಂಗಮೇಶ, ಅಂಬಣ್ಣಾ, ಸೂರ್ಯಕಾಂತ,ಬಾಲಾಜಿ ಕಾರ್ಯಾಚರಣೆಯಲ್ಲಿ ಇದ್ದರು.
ಇದನ್ನೂ ಓದಿ : ಆಸ್ಟ್ರೇಲಿಯಾ ಓಪನ್ : ರಫೆಲ್ ನಡಾಲ್ ಮುಡಿಗೆ ಕಿರೀಟ; ಹೊಸ ದಾಖಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.