ಹುಣಸೂರು : ತಂದೆಯಿಂದಲೇ ನಡೆಯಿತಾ 4 ವರ್ಷದ ಮಗನ ಅಪಹರಣ ?
Team Udayavani, Apr 3, 2022, 9:15 PM IST
ಹುಣಸೂರು : ಹೆತ್ತ ತಂದೆಯೇ ತನ್ನ ಮಗನನ್ನು ಅಪಹರಿಸಿರುವ ಕುರಿತು ಹುಣಸೂರು ನಗರ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಅಂದ ಹಾಗೆ ಈ ಘಟನೆ ನಡೆದಿರುವುದು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ.
ನಗರದ ನ್ಯೂ ಮಾರುತಿ ಬಡಾವಣೆಯ ಬಾಲಕ ಯಾಸಿನ್ (4 ವರ್ಷ) ಅಪಹರಣಕ್ಕೊಳಗಾದಾತ.
ನ್ಯೂ ಮಾರುತಿ ಬಡಾವಣೆಯ ಸುಮೇರಾಳನ್ನು ಮೈಸೂರಿನ ಜಾಫರ್ ಷರೀಫ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಕಳೆದ ನಾಲ್ಕು ವರ್ಷಗಳ ಹಿಂದೆ ಕೌಟುಂಬಿಕ ಕಲಹದಿಂದ ವಿಚ್ಚೇದನವಾಗಿ ಸುಮೇರಾ ತನ್ನ ಮಗನೊಂದಿಗೆ ತಂದೆ ಮನೆಯಲ್ಲೇ ವಾಸವಾಗಿದ್ದಳು.
ಈ ನಡುವೆ ಜಾಫರ್ ಷರೀಪ್ ಮತ್ತೊಂದು ಮದುವೆಯಾಗಿದ್ದಾರೆ. ಆದರೆ ಇಂದು ಜಾಫರ್ ನ್ಯೂ ಮಾರುತಿ ಬಡಾವಣೆಯಲ್ಲಿರುವ ಸುಮೇರಾ ಅವರ ಮನೆಗೆ ಕಾರಿನಲ್ಲಿ ಬಂದಿದ್ದು ಮನೆಯಲ್ಲಿದ್ದ 4 ವರ್ಷದ ಪುತ್ರ ಯಾಸಿನ್ ಬಳಿ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋದವರು ಮತ್ತೆ ವಾಪಾಸ್ ಬಂದಿರಲಿಲ್ಲ.
ಇತ್ತ ಮಗ ಕಾಣದೆ ಎಲ್ಲಾ ಕಡೆ ಹುಡುಕಾಡಿದ ಸುಮೇರಾ ಜಾಫರ್ ತನ್ನ ಮಗನನ್ನು ಅಪಹರಣ ಮಾಡಿದ್ದಾನೆ ಎಂದು ಹುಣಸೂರು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ .
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜಾಫರ್ ಷರೀಪ್ ಪತ್ತೆಗೆ ಬಲೆ ಬಿಸಿದ್ದಾರೆ.
ಇದನ್ನೂ ಓದಿ : ಯುಗಾದಿಯ ಮರುದಿನ ಕುವೆಂಪು ವಿವಿಗೆ ಗಜರಾಜನ ಭೇಟಿ! ವಿದ್ಯಾರ್ಥಿಗಳಿಗಳು, ಸಿಬ್ಬಂದಿ ಆತಂಕದಲ್ಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.