Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು
Team Udayavani, Dec 12, 2024, 11:58 PM IST
ಹುಣಸೂರು: ನಗರದ ಸಂತ ಜೋಸೆಫರ ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿಎಸ್‌ಸಿ ವಿದ್ಯಾರ್ಥಿನಿ, ನಗರಸಭಾ ಸದಸ್ಯ, ಬಿಜೆಪಿ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಎಚ್.ಕೆ.ಗಣೇಶ್ ಕುಮಾರಸ್ವಾಮಿ ಪುತ್ರಿ ಮೋನಿಕಾ (21) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ತಲೆ ನೋವಿನಿಂದ ಬಳಲುತ್ತಿದ್ದ ಮೋನಿಕಾರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರಿಗೆ ತಂದೆ, ತಾಯಿ, ಸಹೋದರಿಯರಿದ್ದಾರೆ. ಮೃತರ ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್, ಶಾಸಕ ಜಿ.ಡಿ.ಹರೀಶ್‌ಗೌಡ, ಎಂ.ಎಲ್.ಸಿ.ಗಳಾದ ವಿಶ್ವನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ನಗರಸಭೆ ಅಧ್ಯಕ್ಷ ಶರವಣ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Micro Finance: ಮೀಟರ್ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ
Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?
CM Post: 2028ರಲ್ಲಿ ಸಿಎಂ ಕುರ್ಚಿ ಕುರಿತು ಮಾತನಾಡೋಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.