Cancerಗೆ ಪತಿ ಬಲಿ: ಪತ್ನಿ, ಪುತ್ರ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಪತ್ತೆ
ನೇಣಿನಿಂದ ಪುತ್ರನನ್ನು ಕೆಳಗಿಳಿಸಿ ಅದೇ ಕುಣಿಕೆಗೆ ಕೊರಳೊಡ್ಡಿದ ಅಮ್ಮ!, 3 ತಿಂಗಳ ಹಿಂದೆ ಪತಿ ಸಾವು
Team Udayavani, Jul 14, 2024, 7:15 AM IST
ಬೆಂಗಳೂರು: ಕ್ಯಾನ್ಸರ್‌ನಿಂದ ಪತಿ ಸಾವನ್ನಪ್ಪಿದ್ದರಿಂದ ಮನನೊಂದು ಪತ್ನಿ ಮತ್ತು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಮ್ಯಾ ಶ್ರೀಧರ್ (43) ಮತ್ತು ಪುತ್ರ ಭಾರ್ಗವ್ (23) ಆತ್ಮಹತ್ಯೆ ಮಾಡಿಕೊಂಡವರು. ಪ್ರಾಥಮಿಕ ತನಿಖೆಯಲ್ಲಿ ಕೆಲವು ತಿಂಗಳ ಹಿಂದೆ ರಮ್ಯಾ ಅವರ ಪತಿ ಶ್ರೀಧರ್ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ತಾಯಿ, ಮಗ ಮಾನಸಿಕ ಖನ್ನತಗೊಳ
ಗಾಗಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಲ ಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ ಮೂಲದ ರಮ್ಯಾ, ಸಾಫ್ಟ್ ವೇರ್ ಎಂಜಿನಿಯರ್ ಶ್ರೀಧರ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರದ್ದು ಅಂತರ್ಜಾತಿ ವಿವಾಹ. ದಂಪತಿ ಭಾರ್ಗವ್ ಹಾಗೂ ಪುತ್ರಿಯೊಂದಿಗೆ ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿದ್ದರು. ಮೊದಲ ಪುತ್ರಿ ಪಿಜಿಯಲ್ಲಿ ಉಳಿದುಕೊಂಡು ಓದುತ್ತಿದ್ದರು. ಶ್ರೀಧರ್‌ಗೆ ಕ್ಯಾನ್ಸರ್‌ನಿಂದ 3 ತಿಂಗಳ ಹಿಂದೆ ಮೃತಪಟ್ಟಿದ್ದರು. ಅದ್ದರಿಂದ ರಮ್ಯಾಗೆ ಮನೆ ನಿರ್ವಹಣೆ ಕಷ್ಟವಾಗಿತ್ತು. ಫ್ಲ್ಯಾಟ್ ಬಾಡಿಗೆ, ಮಕ್ಕಳ ಶುಲ್ಕ, ಮನೆ ನಿರ್ವಹಣೆಗೆ ಹಣ ಹೊಂದಿಸಲು ಕಷ್ಟವಾಗಿ ಖನ್ನತೆಗೊಳಗಾಗಿದ್ದರು. ಮಕ್ಕಳೊಂದಿಗೆ ಸಾಯುವುದಾಗಿ ತನ್ನ ಸಂಬಂಧಿಕರ ಬಳಿ ಹೇಳಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರ್ಥಿಕ, ಮಾನಸಿಕವಾಗಿ ಕುಗ್ಗಿದ್ದ ತಾಯಿ ರಮ್ಯಾ
19 ವರ್ಷದ ಪುತ್ರಿ ಪೇಯಿಂಗ್ ಗೆಸ್ಟ್ (ಪಿಜಿ)ಯಲ್ಲಿ ವಾಸವಾಗಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. 2 ದಿನಕ್ಕೊಮ್ಮೆ ತಾಯಿಗೆ ಕರೆ ಮಾಡಿ ಮಾತಾಡುತ್ತಿದ್ದರು. ಜುಲೈ 9ರಂದು ರಾತ್ರಿ ಕರೆ ಮಾಡಿದ್ದರು. ಆಗಲೂ ತಾಯಿ ಮತ್ತು ಸಹೋದರ ಸಾಯುವ ಮಾತಾಡಿದ್ದರು ಎಂದು ಆಕೆ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಅಂದೇ ರಾತ್ರಿ ಸಹೋದರಿಯ ಜತೆ ಮಾತಾಡಿದ ಭಾರ್ಗವ್ ಬಳಿಕ ಕೋಣೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆತನ ಕೋಣೆಗೆ ಹೋದ ತಾಯಿ, ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ರಮ್ಯಾರ ಪುತ್ರಿ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಿಜಿಯಲ್ಲಿದ್ದ ಪುತ್ರಿ ಮನೆಗೆ ಬಂದಾಗ ಬೆಳಕಿಗೆ
ಜು. 9ರಂದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮನೆಯಿಂದ ಕರೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪುತ್ರಿ ಶುಕ್ರವಾರ ಸಂಜೆ ಮನೆಗೆ ಬಂದಿದ್ದರು. ಬಾಗಿಲು ಬಡಿದರೂ ಪ್ರತಿಕ್ರಿಯೆ ಬಾರದಿದ್ದಾಗ ತನ್ನ ಬಳಿಯಿದ್ದ ಮತ್ತೂಂದು ಕೀಲಿಕೈ ಬಳಸಿ ಬಾಗಿಲು ತೆರೆದಾಗ ತಾಯಿ ಮತ್ತು ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.