ಐ ಆ್ಯಮ್ ಬಾಯ್ಕಾಟಿಂಗ್ ಯು
ಮಾಧ್ಯಮಗಳ ವಿರುದ್ಧ ಮತ್ತೆ ಕಿಡಿಕಾರಿದ ಮುಖ್ಯಮಂತ್ರಿ
Team Udayavani, Apr 29, 2019, 6:30 AM IST
ಬೆಂಗಳೂರು: ‘ಐ ಆ್ಯಮ್ ಬಾಯ್ಕಾಟಿಂಗ್ ಯು’ ಹೀಗೆಂದು ಸಿಟ್ಟಿಗೆದ್ದದ್ದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ. ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜತೆಗೆ ಭಾನುವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮದವರು ಪ್ರತಿಕ್ರಿಯೆಗಾಗಿ ತೆರಳಿದರು. ಈ ಸಂದರ್ಭದಲ್ಲಿ ಕೋಪಗೊಂಡ ಮುಖ್ಯಮಂತ್ರಿ ‘ಐ ಆ್ಯಮ್ ಬಾಯ್ಕಾಟಿಂಗ್ ಯು. ಅದೇನು ಸ್ಟೋರಿನೋ, ಅದೇನೋ ಚರ್ಚೆ ಮಾಡುತ್ತೀರೋ ಮಾಡಿಕೊಳ್ಳಿ. ಆ ಮೂಲಕ ಮಜಾ ಮಾಡಿ. ನಾನು ನಿಮ್ಮ ಜತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳಿದರು.
‘ನಾನು ಏನೂ ಮಾತನಾಡಲ್ಲ. ನೀವೇ ಎಲ್ಲ ನಿರ್ಧಾರ ಮಾಡುತ್ತೀರಿ. ಮತ್ತೆ ನನ್ನನ್ನು ಯಾಕೆ ಕೇಳುತ್ತೀರಿ’ ಎಂದು ಪ್ರಶ್ನಿಸಿದರು. ಒಂದು ವಾರದ ಅವಧಿಯಲ್ಲಿ ಇದು ಎರಡನೇ ಘಟನೆಯಾಗಿದೆ. ಏ.18ರಂದು ಕೂಡ ಮುಖ್ಯಮಂತ್ರಿಯವರು ಮಾಧ್ಯಮಗಳ ವಿರುದ್ಧ ಸಿಟ್ಟಿಗೆದ್ದಿದ್ದರು. ಮೂಲಗಳ ಪ್ರಕಾರ ಮಂಡ್ಯದಲ್ಲಿ ಮತದಾನ ನಡೆದ ಬಳಿಕ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ ಎಂದು ಹೇಳಲಾಗಿರುವ ವರದಿಗಳಿಗೆ ಸಿಎಂ ಕೋಪಗೊಂಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
MUST WATCH
ಹೊಸ ಸೇರ್ಪಡೆ
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.