ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ಸ್ಪಷ್ಟನೆ ನೀಡಲು ಎಚ್‌ಡಿಕೆಗೆ ಗೋಕರ್ಣ ಮಹಾಬಲೇಶ್ವರ ದೇಗುಲ ಅರ್ಚಕರ ಪಟ್ಟು

Team Udayavani, Feb 8, 2023, 9:56 PM IST

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ಅರ್ಚಕರು ನಿಮ್ಮ ಹೇಳಿಕೆಯಿಂದ ಬೇಸರವಾಗಿದ್ದು ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಗೋಕರ್ಣದಲ್ಲೇ ನೀವು ಸ್ಪಷ್ಟೀಕರಣ ನೀಡಬೇಕು ಎಂದು ಕೇಳಿದರು. ಆಗ ಮಾತನಾಡಿದ ಕುಮಾರಸ್ವಾಮಿ, ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಹಿಂದೂ ಹೆಸರಲ್ಲಿ ಅಧಿಕಾರಕ್ಕೆ ಬಂದು ಈಗ ಅ ಧಿಕಾರದಲ್ಲಿ ಇರೋರು ಏನು ಮಾಡಿದ್ದಾರೆ ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನೂ ಮಾಡಿಲ್ಲ. ನಮಗೆ ಸಾವರ್ಕರ್‌ ಸಂಸ್ಕೃತಿ ಬೇಡ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ಬೇಕು ಎಂದರು.

ಪೂಜೆ ವೇಳೆ ಮಹಾಗಣಪತಿ ಪ್ರಸಾದ: ಕುಮಾರಸ್ವಾಮಿ ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಮಹಾಗಣಪತಿ ತಲೆ ಮೇಲಿನಿಂದ ಹೂವು ಬಿದ್ದು ಪ್ರಸಾದವಾಗಿದೆ. ಬಳಿಕ ಕುಮಾರಸ್ವಾಮಿ ಕೈಮುಗಿದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದಲ್ಲಿರುವ ಆತ್ಮಲಿಂಗಕ್ಕೆ ಅರ್ಚಕರ ತಂಡದ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಟೀಲು ಪಿಟೀಲು ಎಂದು ಹೆಸರು ಬದಲಿಸಿಕೊಳ್ಳಲಿ
ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ನಳಿನಕುಮಾರ್‌ ಕಟೀಲ್‌ಗೆ ಸರಿಯಾಗಿ ರಾಜಕೀಯ ಗೊತ್ತಿಲ್ಲ. ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಲು ಹೋಗಿ, ದೇವೇಗೌಡರು ಬಂಗಾರಪ್ಪ ಮನೆಯಿಂದ ಜುಬ್ಟಾ ಹರಿಸಿಕೊಂಡು ಬಂದಿದ್ದರು. ಹೊಡೆಯುವುದು ಎಲ್ಲಿಂದ ಬಂತು? ಈ ಬಗ್ಗೆ ಗೊತ್ತಿಲ್ಲದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಎಂದು ಹೆಸರಿಟ್ಟುಕೊಳ್ಳುವ ಬದಲು ಪಿಟೀಲು ಎಂದು ಇಟ್ಟುಕೊಳ್ಳಲಿ ಎಂದು ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.