“ಆತ್ಮನಿರ್ಭರ’ದಡಿ 114 ಫೈಟರ್ ಜೆಟ್ ತಯಾರಿಕೆ
Team Udayavani, Jun 13, 2022, 10:10 AM IST
ಹೊಸದಿಲ್ಲಿ: ಯುದ್ಧ ಸಾಮಗ್ರಿಗಳ ತಯಾರಿಕೆಯಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿಯನ್ನು ಹೊಂದಿರುವ ಕೇಂದ್ರ ಸರಕಾರ, “ಮೇಕ್ ಇನ್ ಇಂಡಿಯಾ’ ಯೋಜನೆಯ “ಬೈ ಗ್ಲೋಬಲ್ ಆ್ಯಂಡ್ ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯಡಿ, 114 ಫೈಟರ್ ಜೆಟ್ ವಿಮಾನಗಳನ್ನು ಸ್ವದೇಶಿ-ವಿದೇಶಿ ಕಂಪೆನಿಗಳ ಜಂಟಿ ಸಹಭಾಗಿತ್ವದಲ್ಲಿ ತಯಾರಿಸಲು ತೀರ್ಮಾನಿಸಿದೆ.
96 ವಿಮಾನ ನಮ್ಮಲ್ಲೇ ತಯಾರು
ಮಲ್ಟಿರೋಲ್ ಫೈಟರ್ ಏರ್‌ಕ್ರಾಫ್ಟ್ (ಎಂಆರ್‌ಎಫ್ಎ) ಮಾದರಿಯ 114 ವಿಮಾನಗಳಲ್ಲಿ 96 ವಿಮಾನಗಳನ್ನು ಭಾರತದಲ್ಲಿ ಹಾಗೂ ಉಳಿದ 18 ವಿಮಾನಗಳನ್ನು ಈ ಒಪ್ಪಂದದಲ್ಲಿ ಭಾಗಿಯಾಗುವ ಕಂಪೆನಿಗಳು ತಮ್ಮ ದೇಶಗಳಲ್ಲಿ ತಯಾರಿಸಲು ಅವಕಾಶ ನೀಡಲಾಗುತ್ತದೆ.
ಮೊದಲ ಸುತ್ತಿನ ಮಾತುಕತೆ ಪೂರ್ಣ
ಈ ಕುರಿತಂತೆ ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಗಳು ವಿವಿಧ ದೇಶಗಳ ಫೈಟರ್ ಜೆಟ್ ತಯಾರಿಕ ಕಂಪೆನಿಗಳ ಪ್ರತಿನಿಧಿಗಳ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಆ ವೇಳೆ, ಭಾರತವು ಯುದ್ಧ ಸಲಕರಣೆಗಳ ತಯಾರಿಕೆಯಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿಯನ್ನು ಹೊಂದಿರುವ ವಿಚಾರವನ್ನು ಕಂಪೆನಿಗಳ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.