ಕಾನೂನು ಬಾಹಿರವಾಗಿ ಮತಾಂತರ, 8 ಮಂದಿ ಬಂಧನ : ಅಂಗವಿಕಲರು, ನಿರುದ್ಯೋಗಿಗಳೇ ಇವರ ಟಾರ್ಗೆಟ್
Team Udayavani, Sep 4, 2021, 7:43 PM IST
ಲಕ್ನೋ : ಕಾನೂನು ಬಾಹಿರವಾಗಿ ಮತಾಂತರ ಮಾಡುತ್ತಿದ್ದ ಎಂಟು ಮಂದಿಯನ್ನು ಉತ್ತರ ಪ್ರದೇಶದ ಲಕ್ನೋನಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 121 ಎ ಮತ್ತು 123 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜೂನ್ 21ರಂದು ಎಟಿಎಸ್ ಅಧಿಕಾರಿಗಳು, ಕಾನೂನು ಬಾಹಿರ ಮತಾಂತರ ರಾಕೆಟ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ದೆಹಲಿಯಲ್ಲಿ ಬಂಧಿಸಿದ್ದರು. ಆ ಬಂಧನದ ಬೆನ್ನಲ್ಲೇ ಮತ್ತೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇವರೆಲ್ಲರು ಇಸ್ಲಾಮಿಲ್ ದವಾ ಸೆಂಟರ್ (ಐಡಿಸಿ) ಹೆಸರಿನ ಸಂಸ್ಥೆ ಮಾಡಿಕೊಂಡು, ಆ ಮೂಲಕ ಉತ್ತಮ ಶಿಕ್ಷಣ, ಮದುವೆ, ಕೆಲಸದಂತಹ ಆಮಿಷವೊಡ್ಡಿ ಸಾವಿರಾರು ಮಂದಿಯನ್ನು ಮತಾಂತರ ಮಾಡಿಕೊಳ್ಳುತ್ತಿದ್ದರು. ಹೆಚ್ಚಾಗಿ ಅಂಗವಿಕಲರು, ನಿರುದ್ಯೋಗಿಗಳು ಮತ್ತು ಬಡವರನ್ನೇ ಗುರಿಯಾಗಿಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ.
ಬಂಧಿತರಲ್ಲಿ ನಾಲ್ವರು ಮಹಾರಾಷ್ಟ್ರದವರಿದ್ದರೆ ಹರಿಯಾಣ, ಗುಜರಾತ್, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.