Illegal Property: ಲೋಕಾಯುಕ್ತದಿಂದ ಸತತ 2 ಗಂಟೆ ಡಿ.ಕೆ.ಶಿವಕುಮಾರ್‌ ವಿಚಾರಣೆ

ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಆರೋಪ, ಮೊದಲ ಬಾರಿಗೆ ವಿಚಾರಣೆಗೆ ಹಾಜರು

Team Udayavani, Aug 23, 2024, 6:25 AM IST

DK-Shiva-Kumar

ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ ಗಳಿಸಿದ ಆರೋಪದಡಿ ಲೋಕಾಯುಕ್ತ ಪೊಲೀಸರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಗುರುವಾರ ಸತತವಾಗಿ 2 ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರ ನೋಟಿಸ್‌ನ ಹಿನ್ನೆಲೆಯಲ್ಲಿ ಶಿವಕುಮಾರ್‌ ಗುರುವಾರ ಮಧ್ಯಾಹ್ನ ಲೋಕಾಯುಕ್ತ ಕಚೇರಿಗೆ ವಕೀಲ ಟಿ.ಬಿ.ರಾಜಶೇಖರ್‌ ಅವರೊಂದಿಗೆ ಹಾಜರಾಗಿದ್ದರು.

ತನಿಖಾಧಿಕಾರಿ ಡಿವೈಎಸ್‌ಪಿ ಎಂ.ಎಚ್‌. ಸತೀಶ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಮುಂದಿಟ್ಟು ಹೇಳಿಕೆ ದಾಖಲಿಸಿಕೊಂಡರು. ಈ ಪ್ರಕರಣದಲ್ಲಿ ಡಿಕೆಶಿ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ಹಾಜರಾಗಿದ್ದಾರೆ. ಅವರು ಹಾಜರಾದ ಸ್ವಲ್ಪ ಹೊತ್ತಿನಲ್ಲಿ ಮಾಜಿ ಮೇಯರ್‌ ಸಂಪತ್‌ರಾಜ್‌ ಕೂಡ ಆಗಮಿಸಿದರು.

ಡಿಸಿಎಂ ವಿಚಾರಣೆ ಹೇಗಿತ್ತು?
ತನಿಖಾ ತಂಡವು ಕೇಳಬೇಕಿ ರುವ ಪ್ರಶ್ನೆಗಳನ್ನು ಮೊದಲೇ ಸಿದ್ಧತೆ ಮಾಡಿತ್ತು. ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಏನು ಹೇಳುತ್ತೀರಿ ಎಂಬಿತ್ಯಾದಿ ಒಂದೊಂದೇ ಪ್ರಶ್ನೆಗೆ ಡಿಸಿಎಂ ಉತ್ತರಿಸುತ್ತಾ ಹೋದರು. ಕೆಲವು ಪ್ರಶ್ನೆಗಳಿಗೆ ದಾಖಲೆಗಳೊಂದಿಗೆ ಅನಂತರ ಮಾಹಿತಿ ಕೊಡುವುದಾಗಿ ಹೇಳಿದ್ದಾರೆಂದು ತಿಳಿದು ಬಂದಿದೆ. ಲೋಕಾಯುಕ್ತ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಇನ್ನಷ್ಟೇ ಸಾಕ್ಷ್ಯ ಕಲೆ ಹಾಕಬೇಕಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಏನಿದು ಪ್ರಕರಣ?
2013ರಿಂದ 2018ರ ಅವಧಿಯಲ್ಲಿ ಆದಾಯಕ್ಕಿಂತ ಕೋಟ್ಯಂತರ ರೂ. ಅಧಿಕ ಮೌಲ್ಯದ ಆಸ್ತಿ ಸಂಪಾದಿಸಿರುವ ಆರೋಪದಡಿ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿತ್ತು. 2019ರ ಸೆಪ್ಟಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೊಟ್ಟ ಮಾಹಿತಿ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ಬಿಜೆಪಿ ರಾಜ್ಯ ಸರಕಾರವು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಕಾಂಗ್ರೆಸ್‌ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಡಿಕೆಶಿ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಲೋಕಾಯುಕ್ತ ಪೊಲೀಸರಿಗೆ ತನಿಖೆಯನ್ನು ವಹಿಸಿತ್ತು.

ಲೋಕಾಯುಕ್ತಕ್ಕೆ ಮಾಹಿತಿ ಕೊಡದ ಸಿಬಿಐ
ಶಿವಕುಮಾರ್‌ ವಿರುದ್ಧ ಸಿಬಿಐಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ಯನ್ನು ಲೋಕಾಯುಕ್ತಕ್ಕೆ ನೀಡಿರುವ ರಾಜ್ಯ ಸರಕಾರದ ನಡೆಯನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ. ಹಲವು ದಾಖಲೆಗಳನ್ನು ಈಗಾಗಲೇ ಕಲೆ ಹಾಕಿದ್ದು, ನಾವೇ ತನಿಖೆ ಮುಂದುವರಿಸಿ ಚಾರ್ಜ್‌ಶೀಟ್‌ ಹಾಕುವುದಾಗಿ ಸಿಬಿಐ ಪಟ್ಟು ಹಿಡಿದಿದೆ.

ಇತ್ತ ಡಿಸಿಎಂ ವಿರುದ್ಧ ಕಲೆ ಹಾಕಿರುವ ದಾಖಲೆ ನೀಡು ವಂತೆ ಲೋಕಾಯುಕ್ತ ಪೊಲೀಸರು ಸಿಬಿಐ ಬಳಿ ಕೇಳಿದರೂ ಸಿಬಿಐ ಇದುವರೆಗೆ ಯಾವುದೇ ಮಾಹಿತಿ ಒದಗಿಸಿಲ್ಲ. ಹೀಗಾಗಿ ಸಿಬಿಐ ಕಲೆ ಹಾಕಿರುವ ಸಾಕ್ಷ್ಯ ನೀಡಲು ಸೂಚಿಸುವಂತೆ ಲೋಕಾ ತನಿಖಾಧಿಕಾರಿಗಳು ಕೋರ್ಟ್‌ ಮೊರೆ ಹೋಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಲು ತಡೆ ತಂದಿಲ್ಲ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.