Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
ಇಸ್ರೇಲ್ ಸರ್ಕಾರ ಒಪ್ಪಿರುವುದಾಗಿ ನಾವು ಘೋಷಿಸುತ್ತಿದ್ದೇವೆ
Team Udayavani, Nov 27, 2024, 12:27 PM IST
ಟೆಲ್ ಅವಿವ್(ಇಸ್ರೇಲ್): ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಬೇಕು ಎಂಬ ಜಾಗತಿಕ ಮಟ್ಟದ ಒತ್ತಡದ ನಡುವೆ ಇಸ್ರೇಲ್ ಮತ್ತು ಹೆಜ್ಬುಲ್ಲಾ ಲೆಬನಾನ್ ನಲ್ಲಿ ಕದನ ವಿರಾಮ ಘೋಷಿಸುವ ನಿರ್ಧಾರಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ. ಆದರೆ ಗಾಜಾದಲ್ಲಿ ಇಸ್ರೇಲ್ ಯುದ್ಧ ಮುಂದುವರಿದಿದೆ.
ಶಾಶ್ವತವಾಗಿ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಲೆಬನಾನ್ ಮೂಲದ ಭಯೋ*ತ್ಪಾದಕ ಸಂಘಟನೆ ಹೆಜ್ಬುಲ್ಲಾ ಮತ್ತು ಇಸ್ರೇಲ್ ಅಮೆರಿಕದ ಉಸ್ತುವಾರಿಯಲ್ಲಿ ಕದನ ವಿರಾಮಕ್ಕೆ ಸಹಮತ ಸೂಚಿಸಿರುವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಂಗಳವಾರ (ನ.26) ಘೋಷಿಸಿದ್ದಾರೆ.
ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ನ ಭದ್ರತಾ ಕ್ಯಾಬಿನೆಟ್ ಅನುಮತಿ ನೀಡಿದ ಬಳಿಕ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಮುಂದಿನ 60 ದಿನದೊಳಗೆ ಕದನ ವಿರಾಮದ ಒಪ್ಪಂದದ ಪ್ರಕಾರ ಇಸ್ರೇಲ್ ಲೆಬನಾನ್ ನಿಂದ ತನ್ನ ಸೇನಾಪಡೆಯನ್ನು ಹಂತ, ಹಂತವಾಗಿ ವಾಪಸ್ ಕರೆಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬುಲ್ಲಾ ನಡುವಿನ ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಕದನ ವಿರಾಮ ಒಪ್ಪಂದವನ್ನು ಸೆಕ್ಯುರಿಟಿ ಕ್ಯಾಬಿನೆಟ್ ನಲ್ಲಿ ಮಂಡಿಸಿರುವುದಾಗಿ ವರದಿ ತಿಳಿಸಿದೆ.
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ ಪ್ರಧಾನಿ ನಜೀಬ್ ಮಿಕಾಟಿ ಅವರಗೊಂದಿಗೆ ಮಾತುಕತೆ ನಡೆಸಿರುವುದಾಗಿ ಬೈಡನ್ ಪ್ರತಿಕ್ರಿಯೆ ನೀಡಿದ್ದಾರೆ. ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ನಡೆಯುತ್ತಿರುವ ಅನಾಹುತಕಾರಿ ಯುದ್ಧವನ್ನು ನಿಲ್ಲಿಸಬೇಕೆಂಬ ಅಮೆರಿಕದ ಪ್ರಸ್ತಾವನೆಯನ್ನು ಇಸ್ರೇಲ್ ಸರ್ಕಾರ ಒಪ್ಪಿರುವುದಾಗಿ ನಾವು ಘೋಷಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಅವರಿಗೆ ಧನ್ಯವಾದ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಬೈರೂತ್‌ನಲ್ಲಿ ಸಂಭ್ರಮಾಚರಣೆ:
14 ತಿಂಗಳುಗಳ ಕಾಲ ಯುದ್ಧದಿಂದಾಗಿ ನಲುಗಿ ಹೋಗಿದ್ದ ಲೆಬನಾನ್ ರಾಜಧಾನಿ ಬೈರೂತ್‌ನ ಜನ ಬುಧವಾರ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಈ ಕದನ ವಿರಾಮ ಘೋಷಣೆಯನ್ನು ಭಾರತ ಸಹ ಸ್ವಾಗತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.