Incentives Proposal: ಹೈನುಗಾರರ ಪ್ರೋತ್ಸಾಹಧನ 5 ರೂ. ಏರಿಕೆ ಪ್ರಸ್ತಾವನೆ
ಹೈನುಗಾರರ ಉತ್ತೇಜನಕ್ಕೆ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಯತ್ನ
Team Udayavani, Jul 23, 2024, 1:31 AM IST
ಮಂಗಳೂರು: ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ ತಿಳಿಸಿದ್ದಾರೆ.
ಹಾಲು ಒಕ್ಕೂಟ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ ಎಂದರು.
ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.
ಆ.1ರಿಂದ ಪಶು ಆಹಾರಕ್ಕೆ 25 ರೂ. ಸಬ್ಸಿಡಿ
ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಿದೆ. ಇದರಿಂದಾಗಿ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದರು.
ಪುತ್ತೂರಿನ ಕೊಟೆಚಾ ಹಾಲ್ ಬಳಿ 15 ಎಕ್ರೆ ಜಾಗ ವನ್ನು ಒಕ್ಕೂಟದ ಚಟುವಟಿಕೆಗೆ ಕಾದಿರಿಸಲಾಗು ತ್ತಿದೆ. ಇದರಲ್ಲಿ ಹಾಲಿನ ಮಿನಿ ಡೇರಿ, ಗೋದಾಮು ನಿರ್ಮಾಣ, ಹಸುರು ಹುಲ್ಲು ಬೆಳೆಸಲು ಅವಕಾಶ ಇದೆ. ಕೊಯ್ಲ ಪಶು ಸಂಗೋಪನೆ ಕ್ಷೇತ್ರದಲ್ಲಿ 20 ಎಕ್ರೆಯನ್ನು ಹಾಲು ಒಕ್ಕೂಟಕ್ಕೆ ಹಸುರು ಹುಲ್ಲು ಬೆಳೆಸಲು ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದರು.
ಹೆಗ್ಗಡೆಯವರಿಗೆ ಮನವಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೃಷಿ ಮತ್ತು ಹೈನುಗಾರಿಗೆ 20 ಕೋ. ರೂ.ಗಳ ಯೋಜನೆ ರೂಪಿಸಿರು ವುದಾಗಿ ತಿಳಿದುಬಂದಿದೆ. ಇದರಲ್ಲಿ ದ.ಕ.ಜಿಲ್ಲೆಯನ್ನೂ ಪರಿಗಣಿಸುವಂತೆ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಕೇಳಿಕೊಳ್ಳಲಾಗುವುದು ಎಂದರು.
ಗೋವರ್ಧನ ಯೋಜನೆ: ಕೇಂದ್ರ ಸರಕಾರದ ಗೋವರ್ಧನ ಯೋಜನೆಯಡಿ 200 ದನಗಳನ್ನು ಸಾಕಲು 4 ಕೋ. ರೂ. ಬೇಕಾಗಿದ್ದು, ಶೇ.50ನ್ನು ಸರಕಾರ, ಶೇ.50ನ್ನು ಹೈನುಗಾರರೇ ಭರಿಸಬೇಕು. ಇದು ದೊಡ್ಡ ಯೋಜನೆಯಾಗಿರುವುದರಿಂದ ನಿಯಮ ಸಡಿ ಲಿಸಿ 1 ಕೋ. ರೂ.ಗೆ ಇಳಿಸಿದರೆ 50 ಲಕ್ಷ ರೂ. ಮೊತ್ತ ಪಾವತಿಸಲು ಹೈನುಗಾರರು ಸಿದ್ಧರಿದ್ದಾರೆ ಎಂದರು.
ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್, ಕಮಲಾಕ್ಷ ಹೆಬ್ಟಾರ್, ಸವಿತಾ ಎನ್.ಶೆಟ್ಟಿ, ಸ್ಮಿತಾ ಆರ್.ಶೆಟ್ಟಿ, ಸುಭದ್ರಾ ರಾವ್, ವ್ಯವಸ್ಥಾಪಕ ನಿರ್ದೇಶಕ ವಿವೇಕ್, ಮಾರುಕಟ್ಟೆ ಮುಖ್ಯಸ್ಥ ರವಿರಾಜ್ ಉಡುಪ ಉಪಸ್ಥಿತರಿದ್ದರು.
8.29 ಕೋ.ರೂ. ಲಾಭ
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಕಳೆದ ಸಾಲಿನಲ್ಲಿ 1,108.089 ಕೋಟಿ ರೂ. ವಹಿವಾಟು ನಡೆಸಿದ್ದು, 8.29 ಕೋ. ರೂ ನಿವ್ವಳ ಲಾಭ ಗಳಿಸಿದೆ.
ಸೈಲೇಜ್‌ಗೆ ಉತ್ತೇಜನ
ಮೆಕ್ಕೆ ಜೋಳವನ್ನು ಸಂಸ್ಕರಿಸಿ ಮೇವಿನ ಹುಲ್ಲು ಸೆ„ಲೇಜ್(ರಸ ಮೇವು)ಆಗಿ ಪರಿವರ್ತಿಸಲು ಹೈನು ಗಾರರಿಗೆ ಉತ್ತೇಜನ ನೀಡಲಾಗುತ್ತಿದೆ. ಕರಾವಳಿಯಲ್ಲಿ ಅಡಿಕೆ ತೋಟಗಳಲ್ಲೂ ಹಸುರು ಹುಲ್ಲು ಬೆಳೆಸಲು ಎಕ್ರೆಗೆ 10 ಸಾ. ರೂ. ಸಬ್ಸಿಡಿ ನೀಡಲಾಗುತ್ತದೆ. 40 ಸಾವಿರ ರಾಸುಗಳಿಗೆ 3.7 ಕೋಟಿ ರೂ.ಗಳ ವಿಮೆ ಮೊತ್ತ ಭರಿಸಲಾಗುತ್ತಿದೆ ಎಂದು ಸುಚರಿತ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.