ಆದಾಯ ತೆರಿಗೆ ದಾಳಿ ಪ್ರಕರಣ; ಡಿಕೆ ಶಿವಕುಮಾರ್ ಗೆ ಬಂಧನ ಭೀತಿ? ಹೈಕೋರ್ಟ್ ಹೇಳಿದ್ದೇನು
Team Udayavani, Aug 29, 2019, 5:05 PM IST
ಬೆಂಗಳೂರು:ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ದೆಹಲಿಯ ಫ್ಲ್ಯಾಟ್ ನಲ್ಲಿ ಸಿಕ್ಕ ಬೇನಾಮಿ ಹಣ ಹಾಗೂ ಆಸ್ತಿಗಳ ದಾಖಲೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸಬೇಕು ಎಂದು ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಸಂಕಷ್ಟದಲ್ಲಿ ಸಿಲುಕುವಂತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಖುದ್ದು ವಿಚಾರಣೆಗೆ ಹಾಜರಾಗಬೇಕಾಗಿದೆ.
ಡಿಕೆ ಶಿವಕುಮಾರ್ ಸೇರಿದ ಬೆಂಗಳೂರು, ದೆಹಲಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಹಣ, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದುಗೊಳಿಸಬೇಕೆಂದು ಕೋರಿ ಡಿಕೆಶಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ಹೇಳಿದ್ದೇನು?
*ಈ ಪ್ರಕರಣವು ಅರ್ಜಿದಾರರು ಕೋರಿರುವಂತೆ, ಸಂವಿಧಾನದ 226ನೇ ವಿಧಿಗೆ ಒಳಪಟ್ಟು ಪರಿಹಾರ ಪಡೆಯಲು ಯೋಗ್ಯವಾಗಿಲ್ಲ.
*ಹಣ ಲೇವಾದೇವಿ ನಿರ್ಬಂಧ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ಹೆಚ್ಚಿನ ವಿಚಕ್ಷಣ ಧೋರಣೆ ಹೊಂದಿರಬೇಕು.
*ಈ ಪ್ರಕರಣದಲ್ಲಿ ಆರೋಪಿಗಳು ತನಿಖಾಧಿಕಾರಿಗಳ ಮುಂದೆ ತಮ್ಮಲ್ಲಿರುವ ದಾಖಲೆಗಳನ್ನು ಹಾಜರುಪಡಿಸಿ ಯಾವುದೇ ಅಹವಾಲು ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.