Independence Day: 2036ರ ಒಲಿಂಪಿಕ್ಸ್‌  ಆಯೋಜಿಸಲು ಭಾರತ ಬದ್ಧ: ಪ್ರಧಾನಿ

ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಕಳೆದ ಒಂದು ವರ್ಷದಿಂದ ಉತ್ಸುಕತೆ, ಸ್ವಾತಂತ್ರೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ ಘೋಷಣೆ

Team Udayavani, Aug 16, 2024, 6:31 AM IST

MOdi

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ ಕ್ರೀಡಾಹಬ್ಬವಾಗಿರುವ ಒಲಿಂಪಿಕ್ಸ್‌ ಕೂಟವನ್ನು ಆಯೋಜಿಸುವ ಸಾಮರ್ಥ್ಯ ಭಾರತಕ್ಕಿದ್ದು, 2036ರಲ್ಲಿ ಇದನ್ನು ನಡೆಸಲು ಸಕಲ ಪ್ರಯತ್ನ ಮಾಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, “ದೇಶವು ಒಲಿಂಪಿಕ್ಸ್‌ ಕ್ರೀಡಾ ಕೂಟವನ್ನು ಆಯೋಜಿಸಲು ಸಿದ್ಧತೆ ನಡೆಸುತ್ತಿದೆ. 2036ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಭಾರತದ ನೆಲದಲ್ಲಿ ನಡೆಯಬೇಕು ಎಂಬುದು ಭಾರತೀಯರ ಕನಸಾಗಿದೆ. ಅದಕ್ಕಾಗಿ ತಯಾರಿ ಮಾಡಿಕೊಂಡು ಮುಂದೆ ಸಾಗುತ್ತಿದ್ದೇವೆ’ ಎಂದರು.

ಇದೇ ಸಂದರ್ಭದಲ್ಲಿ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತೀಯ ಆಟಗಾರರನ್ನು ಅಭಿನಂದಿಸಿದ ಪ್ರಧಾನಿ ಮೋದಿ, “ಒಲಿಂಪಿಕ್ಸ್‌ ಜಗತ್ತಿನಲ್ಲಿ ಭಾರತದ ಧ್ವಜವನ್ನು ಹಾರಿಸಿದ ನಮ್ಮ ಕ್ರೀಡಾ ಸಾಧಕರು ಇಂದು ತ್ರಿವರ್ಣ ಧ್ವಜದ ಕೆಳಗೆ ನಮ್ಮೊಂದಿಗೆ ಕುಳಿತಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ದೇಶದ ಎಲ್ಲ ಆಟಗಾರರನ್ನು ಅಭಿನಂದಿಸುತ್ತೇನೆ. ಇನ್ನು ಕೆಲವೇ ದಿನ ಗಳಲ್ಲಿ ಪ್ಯಾರಾಲಿಂಪಿಕ್ಸ್‌ಗಾಗಿ ಭಾರತದ ತಂಡ ಪ್ಯಾರಿಸ್‌ಗೆ ತೆರಳಲಿದೆ. ಅವರಿಗೆ ಶುಭಾಶಯ ಕೋರುತ್ತೇವೆ’ ಎಂದರು.

2036ರ ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಕಳೆದ ಒಂದು ವರ್ಷದಿಂದ ಉತ್ಸುಕತೆ ತೋರುತ್ತಿದ್ದು, ಆತಿಥೇಯ ದೇಶದ ಆಯ್ಕೆ ಮುಂದಿನ ವರ್ಷ ನಡೆಯಲಿದೆ. ಭಾರತದೊಂದಿಗೆ ಸೌದಿ ಅರೇಬಿಯಾ ಮತ್ತು ಟರ್ಕಿ ಕೂಡ ಬಿಡ್‌ ಸಲ್ಲಿಸಲು ಉತ್ಸುಕವಾಗಿವೆ. ಭಾರತದಲ್ಲಿ ಒಲಿಂಪಿಕ್ಸ್‌ ಆಯೋಜನೆಯಾದರೆ ಅಹ್ಮದಾ ಬಾದ್‌ ಪ್ರಮುಖ ನಗರವಾಗಲಿದೆ.

ಒಲಿಂಪಿಕ್ಸ್‌  ಸಾಧಕರ ಕುಶಲ ವಿಚಾರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಪದಕ ಸಾಧನೆಗೈದ ಭಾರತದ ಕ್ರೀಡಾಪಟುಗಳನ್ನು ಗುರುವಾರ ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಕುಶಲೋಪರಿ ನಡೆಸಿದರು. ಪ್ಯಾರಿಸ್‌ಗೆ ತೆರಳಿದವರೆಲ್ಲರೂ ಚಾಂಪಿಯನ್ಸ್‌ ಎಂದು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಹಾಕಿ ತಂಡದ ಸದಸ್ಯರು, ಅವಳಿ ಪದಕ ಗೆದ್ದ ಮನು ಭಾಕರ್‌, ಸರಬ್ಜೋತ್‌ ಸಿಂಗ್‌, ಸ್ವಪ್ನಿಲ್‌ ಕುಸಾಲೆ, ಅಮನ್‌ ಸೆಹ್ರಾವತ್‌ ಅವ ರೆಲ್ಲ ಉಪಸ್ಥಿತರಿದ್ದರು. ಆದರೆ ಬೆಳ್ಳಿ ಪದಕ ಜಯಿಸಿದ ನೀರಜ್‌ ಚೋಪ್ರಾ ಜರ್ಮ ನಿಗೆ ತೆರಳಿದ್ದರಿಂದ ಗೈರಾಗಿದ್ದರು. ಇವರೆಲ್ಲರ ಜತೆ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಂಡ ಲಕ್ಷ್ಯ ಸೇನ್‌, ಮೀರಾಬಾಯಿ ಚಾನು, ಲವ್ಲಿನಾ ಬೊರ್ಗೊಹೇನ್‌ ಕೂಡ ಇದ್ದರು. ಕ್ರೀಡಾ ಸಚಿವ ಮನ್‌ಸುಖ್‌ ಮಾಂಡ ವೀಯ ಮತ್ತು ಭಾರತೀಯ ಒಲಿಂ ಪಿಕ್‌ ಅಸೋಸಿಯೇಶನ್‌ ಅಧ್ಯಕ್ಷೆ ಪಿ.ಟಿ. ಉಷಾ ಹಾಜರಿದ್ದರು.

ಹಾಕಿ ಸ್ಟಿಕ್‌, ಜೆರ್ಸಿ ಗಿಫ್ಟ್
ಈ ಸಂದರ್ಭದಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌, ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಅವರು ಎಲ್ಲ ಆಟಗಾರರ ಸಹಿಯುಳ್ಳ ಜೆರ್ಸಿ ಹಾಗೂ ಹಾಕಿ ಸ್ಟಿಕ್‌ ಒಂದನ್ನು ಪ್ರಧಾನಿಯವರಿಗೆ ಉಡುಗೊರೆಯಾಗಿ ನೀಡಿದರು. ಕುಸ್ತಿಪಟು ಅಮನ್‌ ಸೆಹ್ರಾವತ್‌ ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿಯೊಂದನ್ನು ನೆನಪಿನ ಕಾಣಿಕೆಯಾಗಿ ಕೊಟ್ಟರು.
ಶೂಟರ್‌ ಮನು ಭಾಕರ್‌ ಅವರು, ಅವಳಿ ಪದಕ ತಂದಿತ್ತ ಪಿಸ್ತೂಲನ್ನು ಪ್ರಧಾನಿಯವರಿಗೆ ತೋರಿಸುತ್ತ, ಇದರ ಕಾರ್ಯ ವಿಧಾನದ ಕುರಿತು ವಿವರಿಸಿದರು. ಮೋದಿ ಇದನ್ನು ತೀವ್ರ ಕುತೂಹಲದಿಂದ ವೀಕ್ಷಿಸಿದರು.

ಎಲ್ಲರೂ ಚಾಂಪಿಯನ್ಸ್‌
“ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದವರನ್ನು ಭೇಟಿಯಾಗಿ ಖುಷಿಯಾಯಿತು. ಪ್ಯಾರಿಸ್‌ಗೆ ತೆರಳಿದವರೆಲ್ಲರೂ ಚಾಂಪಿಯನ್ಸ್‌. ಭಾರತ ಸರಕಾರ ಕ್ರೀಡೆಗೆ ಉನ್ನತ ಮಟ್ಟದ ಬೆಂಬಲ ನೀಡುವುದನ್ನು ಮುಂದುವರಿಸಲಿದೆ’ ಎಂದು ಮೋದಿ ಟ್ವೀಟ್‌ ಮಾಡಿದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.