ಬಿಜೆಪಿ, ಆರ್‌ಎಸ್‌ಎಸ್‌ನಿಂದಲೇ ಸ್ವಾತಂತ್ರ್ಯ ಉಳಿದಿದೆ; ಸಿ.ಟಿ. ರವಿ
ತಾಲಿಬಾನ್ ಏನು, ಬಿಜೆಪಿ ಏನು, ಆರೆಸ್ಸೆಸ್ ಏನು ಎಂದು ಅರ್ಥ ಮಾಡಿಕೊಳ್ಳದಷ್ಟು ಏನಾದರೂ ವ್ಯತ್ಯಾಸ ಆಗಿದೆಯೇ
Team Udayavani, Sep 28, 2021, 10:11 AM IST
ಬೆಂಗಳೂರು: ದೇಶದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಇರುವುದರಿಂದಲೇ ಸ್ವಾತಂತ್ರ್ಯ ಉಳಿದಿದೆ. ಆರ್‌ಎಸ್‌ಎಸ್ ಇರುವುದರಿಂದಲೇ ಸಿದ್ದರಾಮಯ್ಯ ಅವರ ಮೊಮ್ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರೆಸ್ಸೆಸ್ ಸ್ಥಾಪಕರಾದ ಡಾ. ಕೇಶವ ಬಲಿರಾಮ್ ಹೆಡಗೇವಾರ್ ಅವರು, ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಇದನ್ನೂ ಓದಿ:ಥಿಯೇಟರ್ ‘ರೀ ಓಪನ್’ ಗೆ ಸ್ಟಾರ್ ಸಿನಿಮಾವೇ ಔಷಧಿ: ಇನ್ನೂ ತೆರೆಯದ 500ಕ್ಕೂ ಅಧಿಕ ಚಿತ್ರಮಂದಿರ
ಕಾಂಗ್ರೆಸ್ಸಿಗರು ಟೀಕಿಸುವ ಮೊದಲು ಅವರದೇ ಚರಿತ್ರೆಯನ್ನು ಅಭ್ಯಸಿಸಲಿ ಎಂದು ತಿಳಿಸಿದರು. ಜಂಗಲ್ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಮೊದಲು ಹೆಡಗೇವಾರ್ ಅವರು ತಮ್ಮ ಸರಸಂಘಚಾಲಕ ಸ್ಥಾನದಿಂದ ಬಿಡುಗಡೆ ಹೊಂದಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು. ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಅವರು ಸುಳ್ಳುರಾಮಯ್ಯ ಆಗಿದ್ದಾರೆ. ವಯಸ್ಸಾದ ಮೇಲೆ ಕಣ್ಣಿನ ಪೊರೆ ಜಾಸ್ತಿ ಆಗುತ್ತಂತೆ.
ಅವರಿಗೆ ಯಾವ್ಯಾವ ಪೊರೆ ಬೆಳೆದಿದೆಯೋ ಗೊತ್ತಿಲ್ಲ. ಅದೇ ಕಾರಣಕ್ಕೆ ತಾಲಿಬಾನ್ ಮತ್ತು ಆರೆಸ್ಸೆಸ್ ಒಂದೇ ತರ ಕಾಣುತ್ತಿದೆ ಎಂದು ಆಕ್ಷೇಪಿಸಿದರು. ಪೊರೆ ಸರಿಸಿದರೆ ತಾಲಿಬಾನ್ ಏನೆಂದು ಗೊತ್ತಾಗುತ್ತದೆ. ತಾಲಿಬಾನ್ ಇದ್ದರೆ ಸಿದ್ದರಾಮಯ್ಯ ಬದುಕಲು ಸಾಧ್ಯವಿತ್ತೇ ಎಂದು ಕೇಳಿದರು. ಅಕಸ್ಮಾತ್ ತಾಲಿಬಾನ್ ಸ್ಥಿತಿ ಇಲ್ಲಿ ಇದ್ದರೆ ಪಂಚೆ ಮಾತ್ರ ನೇತಾಡುತ್ತಿರಲಿಲ್ಲ. ಅವರೂ ನೇತಾಡುವ ಸ್ಥಿತಿ ಇರುತ್ತಿತ್ತು.
ತಾಲಿಬಾನ್ ಏನು, ಬಿಜೆಪಿ ಏನು, ಆರೆಸ್ಸೆಸ್ ಏನು ಎಂದು ಅರ್ಥ ಮಾಡಿಕೊಳ್ಳದಷ್ಟು ಏನಾದರೂ ವ್ಯತ್ಯಾಸ ಆಗಿದೆಯೇ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನವರು ಎಸ್‌ಡಿ ಪಿಐ, ಪಿಎಫ್ಐ, ಎಂಐಎಂ ಇವರೆಲ್ಲ ಯಾರಿಗೆ ನೆಂಟರು? ನಾವು ಯಾವತ್ತೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ ಎಂದರು.
ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಾಗ ಅತಿ ಹೆಚ್ಚು ಸಂಖ್ಯೆಯಲ್ಲಿ ಜೈಲಿಗೆ ಹೋಗಿ ಸಂಕಷ್ಟಕ್ಕೆ ಒಳಗಾದವರು ಬಿಜೆಪಿ, ಆರ್‌ಎಸ್ ಎಸ್‌ನವರು. ಆದರೆ, ಕಾಂಗ್ರೆಸ್‌ನವರು ಇಂದಿರಾರನ್ನು ಹೊಗಳಿಕೊಂಡೇ ಕಾಲ ಕಳೆದರು. ನಮ್ಮಿಂದ ಸ್ವಾತಂತ್ರ್ಯ ಉಳಿಯಿತು. ಆಗ ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ನಿಮ್ಮ ಮಕ್ಕಳು, ಮೊಮ್ಮಕ್ಕಳು ಸುರಕ್ಷಿತವಾಗಿರಲು ಆರೆಸ್ಸೆಸ್ ಮಜಬೂತಾಗಿ ಇರಬೇಕೆಂದು ಸಿದ್ದರಾಮಯ್ಯ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.