ಭಾರತದಲ್ಲಿ 24 ಗಂಟೆಯಲ್ಲಿ 21,566 ಕೋವಿಡ್ ಸೋಂಕು ಪ್ರಕರಣ ಪತ್ತೆ, 45 ಮಂದಿ ಸಾವು
ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,31,50,434ಕ್ಕೆ ಹೆಚ್ಚಳವಾಗಿದೆ.
Team Udayavani, Jul 21, 2022, 10:33 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 21,566 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 45 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 5,25,870ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ: ಕೈ ನಾಯಕರಿಗೆ ಬಿಎಸ್ ವೈ ಟಾಂಗ್
ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,48,882ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,31,50,434ಕ್ಕೆ ಹೆಚ್ಚಳವಾಗಿದೆ.
24ಗಂಟೆಯಲ್ಲಿ 3,227 ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಸೋಂಕು ಪ್ರಕರಣದ ಚೇತರಿಕೆ ಪ್ರಮಾಣ 98.46ರಷ್ಟಿದೆ. ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 200.91 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.4.25ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.51ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.