ಖಾದ್ಯತೈಲದಲ್ಲಿ ಭಾರತ ಸ್ವಾವಲಿಂಬಿಯಾಗಬೇಕಿದೆ: ಶೋಭಾ ಕರಂದ್ಲಾಜೆ
Team Udayavani, Mar 9, 2022, 6:55 AM IST
ಬೆಂಗಳೂರು: ಭಾರತವು ಇಂದಿಗೂ ಖಾದ್ಯ ತೈಲಕ್ಕೆ ವಿದೇಶಗಳನ್ನೇ ಆಶ್ರಯಿಸಿರುವ ಪರಿಣಾಮ, ಅತಿ ಕೆಟ್ಟ ಖಾದ್ಯ ತೈಲಗಳು ಭಾರತಕ್ಕೆ ಸರಬರಾಜು ಆಗುತ್ತಿವೆ. ಗುಣಮಟ್ಟದ ತೈಲವನ್ನು ಪಡೆಯಬೇಕಾದರೆ ಖಾದ್ಯತೈಲ ಉತ್ಪಾದನೆಯಲ್ಲಿ ನಮ್ಮ ದೇಶವು ಸ್ವಾವಲಂಬನೆ ಸಾಧಿಸಬೇಕಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಎಫ್ ಕೆಸಿಸಿಐ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಸಾಧಕಿಯರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಮಲೇಷಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಗುಣಮಟ್ಟದ ಖಾದ್ಯತೈಲಗಳು ಆಮದು ಆಗುತ್ತಿಲ್ಲ. ಅಲ್ಲಿಂದ ಬಂದ ಅನಂತರ ಕಂಪೆನಿಗಳು ತಮ್ಮ ಬ್ರ್ಯಾಂಡ್ ಹಾಕಿಕೊಂಡು ಎಣ್ಣೆ ತಯಾರಿಸುತ್ತವೆ. ಹೀಗಾಗಿ, ದೇಶದಲ್ಲಿ ಉತ್ತಮ ಖಾದ್ಯತೈಲ ಉತ್ಪಾದನೆ ಮಾಡಬೇಕಿದೆ ಎಂದು ಹೇಳಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ ಸ್ವೀಕರಿಸಿದರು. ಕೈಗಾರಿಕೆಗಳು ಮತ್ತು ವಾಣಿಜ್ಯ ನಿರ್ದೇಶನಾಲಯದ ಆಯುಕ್ತ ಗುಂಜನ್ ಕೃಷ್ಣಾ, ಆದಾಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಸೇರಿದಂತೆ ಹಲವರು ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.