London: ಭಾರತೀಯ ಮೂಲದ ಮಹಿಳೆಗೆ ಬಸ್ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ
Team Udayavani, May 15, 2024, 12:23 PM IST
ವಾಷಿಂಗ್ಟನ್: ಭಾರತೀಯ ಮೂಲದ ಮಹಿಳೆ(66ವರ್ಷ)ಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ವಾಯುವ್ಯ ಲಂಡನ್ ನ ಬಸ್ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
ಈ ಘಟನೆ ಮೇ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಬಂಧಿಸಿ, ಕೊಲೆ ಆರೋಪ ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.
ಮೃತ ಮಹಿಳೆಯನ್ನು ಅನಿತಾ ಮುಖೈ ಎಂದು ಗುರುತಿಸಲಾಗಿದೆ. ಈಕೆ ನ್ಯಾಷನಲ್ ಹೆಲ್ತ್ ಸರ್ವೀಸ್ ನಲ್ಲಿ ಮೆಡಿಕಲ್ ಸೆಕ್ರೆಟರಿಯಾಗಿ(ಪಾರ್ಟ್ ಟೈಮ್) ಕಾರ್ಯನಿರ್ವಹಿಸುತ್ತಿದ್ದರು. ಲಂಡನ್ ನ ಎಡ್ಗೇರ್ ಪ್ರದೇಶದ ಬ್ರಂಟ್ ಓಕ್ ಬ್ರಾಡ್ ವೇ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿಢೀರನೆ ಬಂದು ಚೂರಿಯಿಂದ ಇರಿದುಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಕುತ್ತಿಗೆ ಮತ್ತು ಎದೆಗೆ ಇರಿದ ಪರಿಣಾಮ ಆಕೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಆರೋಪಿ ವಿರುದ್ಧ ಕೊಲೆ ಮತ್ತು ಮಾರಕ ಆಯುಧ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
China; ಮುಳುಗಿದ ಅಣ್ವಸ್ತ್ರ ಸಬ್ಮರೀನ್! : ಅಮೆರಿಕ ಮಾಹಿತಿ
Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.