Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!
ದೇಶದಲ್ಲಿನ ಸೈಬರ್ ವಂಚನೆ ಜಾಲದಲ್ಲಿ ಬಂಧಿತರ ಸಂಖ್ಯೆ ತುಂಬಾ ಕಡಿಮೆ
Team Udayavani, Jun 17, 2024, 3:04 PM IST
ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಭಾರತದಾದ್ಯಂತ ನಡೆದ ಸೈಬರ್ ವಂಚನೆ ಪ್ರಕರಣಗಳಲ್ಲಿ ಸಾರ್ವಜನಿಕರು ಕಳೆದುಕೊಂಡ ಹಣ ಕೆಲವು ರಾಜ್ಯಗಳ ವಾರ್ಷಿಕ ವೆಚ್ಚಕ್ಕೆ ಹೋಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ
ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆಗೊಳಿಸಿದ ಅಂಕಿಅಂಶದ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಯಲ್ಲಿ ಭಾರತೀಯರು ಕಳೆದುಕೊಂಡ ಹಣ ಬರೋಬ್ಬರಿ 25,000 ಸಾವಿರ ಕೋಟಿ. ಇದು ಸಿಕ್ಕಿಂ ರಾಜ್ಯದ ವಾರ್ಷಿಕ ಬಜೆಟ್ ಗಿಂತ ದುಪ್ಪಟ್ಟಾದ ಹಣವಾಗಿದೆ.
ಸೈಬರ್ ವಂಚನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಇನ್ಸ್ಟಾಗ್ರಾಮ್, ವಾಟ್ಸಪ್ ಮತ್ತು ಗೂಗಲ್ ಜತೆ ಉನ್ನತ ಮಟ್ಟದ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಮೂರು ವರ್ಷಗಳಲ್ಲಿ 25,000 ಸಾವಿರ ಕೋಟಿ ಸೈಬರ್ ವಂಚನೆಯಲ್ಲಿ ಕಳೆದುಕೊಂಡಿದ್ದು, ಕಳೆದ ವರ್ಷ ದಿನಂಪ್ರತಿ 27 ಸೈಬರ್ ವಂಚನೆ ಪ್ರಕರಣ ದಾಖಲಾಗಿತ್ತು. 2024ರ ಜನವರಿಯಿಂದ ಜೂನ್ ವರೆಗೆ ಸೈಬರ್ ಕ್ರೈಮ್ ಗೆ ಸಂಬಂಧಿಸಿದಂತೆ 709 ಪ್ರಕರಣಗಳು ದಾಖಲಾಗಿದ್ದು, ಸುಮಾರು ಒಂದು ಕೋಟಿ ರೂಪಾಯಿಯಷ್ಟು ಕಳೆದುಕೊಂಡಿದ್ದು, ಒಟ್ಟು ಮೊತ್ತ 1,421 ಕೋಟಿ ರೂಪಾಯಿ ಎಂದು ಅಂಕಿಅಂಶ ತಿಳಿಸಿದೆ.
ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, ದೇಶದಲ್ಲಿನ ಸೈಬರ್ ವಂಚನೆ ಜಾಲದಲ್ಲಿ ಬಂಧಿತರ ಸಂಖ್ಯೆ ತುಂಬಾ ಕಡಿಮೆ. ಸೈಬರ್ ವಂಚನೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಶೇ.1ರಷ್ಟಿದೆ ಎಂದು ತಿಳಿಸಿದೆ.
ಸೈಬರ್ ವಂಚನೆಗೆ ಸಂಬಂಧಿಸಿದಂತೆ ಸುಮಾರು 66,000 ಸಾವಿರಕ್ಕೂ ಅಧಿಕ ಎಫ್ ಐಆರ್ ದಾಖಲಾಗಿದೆ. ಆದರೆ ಈವರೆಗೆ ಬಂಧಿತರಾದವರ ಸಂಖ್ಯೆ ಕೇವಲ 500 ಮಾತ್ರ ಎಂದು ಅಂಕಿಅಂಶ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.