2032ರ ಒಲಿಂಪಿಕ್ ಗೇಮ್ಸ್ ಆತಿಥ್ಯಕ್ಕೆ ಭಾರತ ಪ್ರಯತ್ನ
ಐಒಎ ಅಧ್ಯಕ್ಷ ನರೀಂದರ್ ಬಾತ್ರಾ ವಿಶ್ವಾಸ
Team Udayavani, May 3, 2020, 5:45 AM IST
ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗ ಶಮನಗೊಂಡ ಬಳಿಕ ಭಾರತವು 2032ರ ಒಲಿಂಪಿಕ್ ಗೇಮ್ಸ್ ಮತ್ತು ಇನ್ನಿತರ ಅಂತಾರಾಷ್ಟ್ರೀಯ ಕೂಟಗಳ ಆತಿಥ್ಯ ವಹಿಸಲು ಪ್ರಯತ್ನ ನಡೆಸಲಿದೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ಹೇಳಿದ್ದಾರೆ.
ಭಾರತವು ಹತ್ತು ವರ್ಷಗಳ ಹಿಂದೆ ಕಾಮನ್‌ವೆಲ್ತ್ ಗೇಮ್ಸ್ ಕೂಟವನ್ನು ಅದ್ಧೂರಿಯಾಗಿ ಆಯೋಜಿಸಿತ್ತು. ಇದರಿಂದ ಭಾರತ ಹಲವು ಪಾಠಗಳನ್ನು ಕಲಿತಿದೆ. ಆದರೆ ಇದರಿಂದ ಮುಂದೆಯೂ ಆತಿಥ್ಯ ವಹಿಸುವ ಪ್ರಯತ್ನದಲ್ಲಿ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಬಾತ್ರಾ ಹೇಳಿದರು. ಹಾಗೆಯೇ ಮುಂಬರುವ 2036ರ ಯೂತ್ ಒಲಿಂಪಿಕ್ ಗೇಮ್ಸ್ ಮತ್ತು 2032ರ ಒಲಿಂಪಿಕ್ಸ್ ಕೂಟ ಆಯೋಜಿಸುವ ನಿಟ್ಟಿನಲ್ಲಿ ಬಿಡ್ ಗೆಲ್ಲಲು ಗಂಭೀರ ಪ್ರಯತ್ನ ನಡೆಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಐಒಸಿಗೆ ಪತ್ರ
ಒಲಿಂಪಿಕ್ ಕೂಟ ಆಯೋಜಿಸುವ ನಿಟ್ಟಿನಲ್ಲಿ ನಾವು ಉತ್ಸುಕರಾಗಿದ್ದೇವೆ ಎಂದು ಭಾರತ ಈಗಾಗಲೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಗೆ (ಐಒಸಿ) ಪತ್ರದ ಮೂಲಕ ತಿಳಿಸಿದೆ. ಆದರೆ 2026ರ ಕೂಟ ಆಯೋಜಿಸಲು ಭಾರತವು ಥಾಯ್ಲೆಂಡ್, ರಶ್ಯ ಮತ್ತು ಕೊಲಂಬಿಯಾದಿಂದ ಸ್ಪರ್ಧೆ ಎದುರಿಸಲಿದೆ. 2032ರ ಒಲಿಂಪಿಕ್ಸ್ ಆಯೋಜಿಸಲು ಆಸ್ಟ್ರೇಲಿಯದ ಕ್ವೀನ್ಸ್ ಲ್ಯಾಂಡ್, ಮತ್ತು ಸೋಲ್-ಪ್ಯಾಂಗ್‌ಯಾಂಗ್ ಕೂಡ ಜಂಟಿಯಾಗಿ ಬಿಡ್ ಸಲ್ಲಿಸುವ ಸಾಧ್ಯತೆಯಿದೆ.
ಟೋಕಿಯೊ ಒಲಿಂಪಿಕ್ಸ್ ಖಂಡಿತ ನಡೆಯಲಿದೆ
ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ಕೋವಿಡ್-19ದಿಂದಾಗಿ ಈಗಾಗಲೇ ಮುಂದೂಡಲ್ಪಟ್ಟ 2020ರ ಟೋಕಿಯೊ ಒಲಿಂಪಿಕ್ಸ್ ಮುಂದಿನ ವರ್ಷ ಖಂಡಿತವಾಗಿಯೂ ನಡೆಯಲಿದೆ ಎಂದು ಐಒಸಿ ಸದಸ್ಯ ಮತ್ತು ಐಒಎ ಅಧ್ಯಕ್ಷ ನರೀಂದರ್ ಬಾತ್ರಾ ತಿಳಿಸಿದ್ದಾರೆ.
ಕೋವಿಡ್-19ಕ್ಕೆ ಮದ್ದು ಹುಡುಕಲು ಸಾಧ್ಯವಾಗದಿದ್ದರೆ ಮುಂದಿನ ವರ್ಷವೂ ಒಲಿಂಪಿಕ್ಸ್ ಆಯೋಜಿಸುವುದು ಸಂಶಯ ಎಂದು ಕೆಲವು ಖ್ಯಾತ ವಿಜ್ಞಾನಿಗಳು ಮತ್ತು ವೈದ್ಯರು ತಿಳಿಸಿದ್ದರೆ, ಕೋವಿಡ್-19 ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಗೇಮ್ಸ್ ನಡೆಯಬಹುದೆಂದು ಜಪಾನ್ ವೈದ್ಯಕೀಯ ಅಸೋಸಿಯೇಶನ್ ಅಧ್ಯಕ್ಷರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.