ಜೂನ್ ತಿಂಗಳಿನಲ್ಲಿ ಶೇ.8.5 ಕ್ಕೆ ಕುಸಿದ ನಿರುದ್ಯೋಗ ದರ
Team Udayavani, Jun 25, 2020, 3:31 PM IST
ಹೊಸದಿಲ್ಲಿ : ಕಳೆದ ಮೂರು ತಿಂಗಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದಾಗಿ ದೇಶದ ಸಾಕಷ್ಟು ಜನರ ಉದ್ಯೋಗಕ್ಕೆ ಕುತ್ತು ಬಿದ್ದಿದಲ್ಲದೇ ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ವರದಿಗಳು ಎಚ್ಚರಿಸುತ್ತಲೇ ಇದ್ದವೂ. ಆದರೆ ಆನ್‌ಲಾಕ್ ಆದ ಅನಂತರ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ದರ ಕಡಿತವಾಗಿದ್ದು, ಜೂನ್ 21 ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ನಿರುದ್ಯೋಗ ದರ ಶೇ.8.5 ಕ್ಕೆ ಕುಸಿದಿದೆ. ಆ ಮೂಲಕ ಲಾಕ್‌ಡೌನ್ ಮುನ್ನ ಇದ್ದ ನಿರುದ್ಯೋಗ ದರಕ್ಕೆ ಸಮನಾಗಿದೆ ಎಂದು ವರದಿ ತಿಳಿಸಿದೆ.
ಹೌದು ಜೂನ್ ತಿಂಗಳ ಮೊದಲ ಮೂರು ವಾರಗಳಲ್ಲಿ ನಿರುದ್ಯೋಗ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗಿದ್ದು, ಏಪ್ರಿಲ್-ಮೇ ತಿಂಗಳಲ್ಲಿ ದಾಖಲಾಗಿದ್ದ ಅತಿ ಹೆಚ್ಚು ನಿರುದ್ಯೋಗ ದರ ಶೇ.25.83 ಕ್ಕೆ ಹೋಲಿಸಿದರೆ ಜೂನ್ 12 ಕ್ಕೆ ಕೊನೆಗೊಂಡ ವಾರದಲ್ಲಿ ಶೇ11.2 ರಷ್ಟು ದಾಖಲಾಗುವ ಮೂಲಕ ನಿರುದ್ಯೋಗ ದರ ತೀರಾ ಕುಸಿದಿದೆ. ಆದರೆ ನಗರ ಪ್ರದೇಶಗಳಲ್ಲಿನ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ ಕಂಡೂ ಬಂದರೂ ಲಾಕ್‌ಡೌನ್‌ನ ಹಿಂದಿನ ಅವಧಿಗಿಂತ ಹೆಚ್ಚಾಗಿದೆ.
ಇನ್ನು ದೇಶದ ಹಲವಾರು ನಗರ, ಪಟ್ಟಣ ಹಾಗೂ ಮಹಾನಗರಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟುಗಳು ನಿಧಾನವಾಗಿ ತೆರೆದುಕೊಳ್ಳುತ್ತಿದ್ದು, ಮಹಾನಗರಗಳಲ್ಲಿನ ಮಾಲ್‌ಗಳಿಗೆ ಭೇಟಿ ನೀಡುವವರ ಪ್ರಮಾಣವೂ ಕ್ರಮೇಣ ಹೆಚ್ಚಾಗುತ್ತಿದೆ.
ಜತೆಗೆ ಚಿಕ್ಕ ಪುಟ್ಟ ವ್ಯಾಪಾರಗಳು ಸಹ ಲಾಭ ಕಾಣಲಾರಂಭಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗಲಾರಂಭಿಸಿವೆ. ಬರುವ ಕೆಲ ತಿಂಗಳಲ್ಲಿ ಗ್ರಾಮೀಣ ಉದ್ಯೋಗವಕಾಶ ದರ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಜೂನ್ 21 ಕ್ಕೆ ಕೊನೆಗೊಂಡ ವಾರದಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗ ದರವು ಶೇ 7.26 ಕ್ಕೆ ಕುಸಿದಿದೆ. ಮಾರ್ಚ್ 22 ಕ್ಕೆ ಕೊನೆಗೊಂಡ ವಾರದಲ್ಲಿ ಈ ದರ ಶೇ 8.3 ರಷ್ಟಿತ್ತು.
ಗ್ರಾಮೀಣ ಭಾಗದಲ್ಲಿ ಮನರೇಗಾ ಕೂಲಿ ಕೆಲಸ ಹಾಗೂ ಮುಂಗಾರು ಹಂಗಾಮಿನ ಚಟುವಟಿಕೆಗಳಿಂದ ಉದ್ಯೋಗವಕಾಶಗಳು ಸೃಷ್ಟಿ ಆಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದ್ದು, ಸೂಕ್ತ ಸಮಯದಲ್ಲಿ ಮನರೇಗಾ ಕೂಲಿ ಕೆಲಸಗಳಿಗೆ ಸರಕಾರ ಹೆಚ್ಚು ಒತ್ತು ನೀಡಿದ್ದರಿಂದ ಹಾಗೂ ಸಕಾಲಕ್ಕೆ ಮಳೆಯಾಗಿ ಬಿತ್ತನೆ ಆರಂಭವಾಗಿದ್ದರಿಂದ ನಿರುದ್ಯೋಗ ಸಮಸ್ಯೆ ಕಡಿಮೆಯಾಗಲು ಪ್ರಮುಖ ಕಾರಣ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.