Invest Karnataka: ಸಮಾವೇಶಕ್ಕೆ ಸಹಕಾರ ಕೋರಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್
ದಿಲ್ಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ, ಎಚ್.ಡಿ.ಕುಮಾರಸ್ವಾಮಿ ಭೇಟಿ
Team Udayavani, Sep 10, 2024, 9:42 PM IST
ಬೆಂಗಳೂರು: ಮುಂಬರುವ ಫೆಬ್ರವರಿಯಲ್ಲಿ 12-14 ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಹೆಚ್ಚಿನ ಹೂಡಿಕೆ ನಿರೀಕ್ಷಿಸಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಹಾಗೂ ಎಚ್.ಡಿ. ಕುಮಾರಸ್ವಾಮಿಯವರ ಭೇಟಿಯಾಗಿ ಚರ್ಚಿಸಿದರು.
ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್‌ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.
#WATCH | Delhi: On Invest Karnataka 2025, Karnataka Minister MB Patil says, “The Invest Karnataka 2025 will held in 2025 from 12-14 February in Bengaluru. It will be a world event on the lines of the World Economic Forum held in Davos. We are going to focus on startups and… pic.twitter.com/a8oD8p2qoO
— ANI (@ANI) September 10, 2024
ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ಭೇಟಿಯಾದ ಪಾಟೀಲ್ ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು. ವಿದ್ಯುಚ್ಛಾ ಲಿತ ವಾಹನ (ಇ.ವಿ.) ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕ ಹೊರಗಿಟ್ಟ ಬಗ್ಗೆ ಮಾತುಕತೆ ನಡೆಸಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಬೇಗನೆ ಹಾಳಾಗುವ ಪದಾರ್ಥಗಳ ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್‌ಟಿ ತೆರಿಗೆ ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.