Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್.ಡಿ.ಕುಮಾರಸ್ವಾಮಿ
ನಮ್ಮ ಮೇಲೆ ದ್ವೇಷ ಇದ್ದರೆ ಬೇರೆ ರೀತಿ ತೀರಿಸಿಕೊಳ್ಳಿ, ಕಾರ್ಮಿಕರನ್ನು ಏಕೆ ಬೀದಿಗೆ ತರುತ್ತೀರಿ: ಕೇಂದ್ರ ಸಚಿವ
Team Udayavani, Sep 6, 2024, 3:39 AM IST
ಶಿವಮೊಗ್ಗ: ಕುದುರೆಮುಖ ಮೈನಿಂಗ್ ಕಂಪನಿಗೆ 1700 ಕೋಟಿ ಬಿಡುಗಡೆಗೆ ನಾನು ಸಹಿ ಹಾಕಿದ್ದೇನೆ. ಅರಣ್ಯ ಸಚಿವ ಈಶ್ವರ ಖಂಡ್ರೆಗೆ ತಲೆಬುಡ ಗೊತ್ತಿಲ್ಲ. ಸಣ್ಣಪುಟ್ಟ ದೋಷ ಇದ್ದರೂ ಸರಿ ಮಾಡಿಕೊಡ್ತೀವಿ ಎಂದು ಕುದುರೆಮುಖದವರು ಹೇಳಿದ್ದಾರೆ.
ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ. ನಷ್ಟವಾಗುತ್ತಿದೆ. ನಮ್ಮ ಮೇಲೆ ದ್ವೇಷ ಇದ್ದರೆ ಬೇರೆ ರೀತಿ ತೀರಿಸಿಕೊಳ್ಳಿ. ಆದರೆ ಕಾರ್ಮಿಕರನ್ನು ಏಕೆ ಬೀದಿಗೆ ತರುತ್ತೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಬಳಿಯ ದೇವದಾರಿ ಗಣಿಗಾರಿಕೆ ಯೋಜನೆಗೆ ಒಪ್ಪಿಗೆ ನೀಡಿದ್ದು ಹಿಂದಿನ ಸಿದ್ದರಾಮಯ್ಯ ಸರ್ಕಾರ. ಆ ಯೋಜನೆ ಕಾರ್ಯಗತ ಮಾಡುವ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಹಣಕಾಸು ಖಾತ್ರಿ ಕೊಡುವ ಕಡತ ಹಣಕಾಸು ಇಲಾಖೆಗೆ ಕಳಿಸುವುದಕ್ಕೆ ಮಾತ್ರ ನಾನು ಒಪ್ಪಿಗೆ ಕೊಟ್ಟಿದ್ದೇನೆ. ಇಲ್ಲಿ ನೋಡಿದರೆ ಕಾಂಗ್ರೆಸ್ ಸರ್ಕಾರ ಕುಮಾರಸ್ವಾಮಿ ಗಣಿಗೇ ಅನುಮತಿ ಕೊಟ್ಟಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡುತ್ತಿದೆ ಎಂದರು.
ನನ್ನ ಖಾತೆಗೆ ಯಾವುದೇ ಅನುದಾನ ಇಲ್ಲ, ಸುನಾಮಿ ವಿರುದ್ಧ ಈಜುತ್ತಿದ್ದೇನೆ: ಎಚ್‌ಡಿಕೆ
ನನ್ನ ಖಾತೆಗೆ ಯಾವುದೇ ಅನುದಾನ ಇರುವುದಿಲ್ಲ. ಸೇಲ್ ಮೂಲಕವೇ ಬಂಡವಾಳ ಹೊಂದಿಸಿಕೊಳ್ಳಬೇಕು. ಇದಕ್ಕಾಗಿ ಶಕ್ತಿ ಮೀರಿ ಹೋಮ್ ವರ್ಕ್ ಮಾಡುತ್ತಿದ್ದೇನೆ. ಸುನಾಮಿ ವಿರುದ್ಧ ಈಜುವ ಕೆಲಸ ಮಾಡುತ್ತಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
2004ರಲ್ಲಿ ಪಶ್ಚಿಮ ಬಂಗಾಳದ ಕಾರ್ಖಾನೆಗೆ 19 ಸಾವಿರ ಕೋಟಿ ರೂ. ಬಂಡವಾಳ ಹೂಡಲಾಗಿತ್ತು. ಅದೇ ಮಾದರಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇನತಕ್ಕೆ ಅಗತ್ಯವಿರುವ ಸುಮಾರು 15 ಸಾವಿರ ಕೋಟಿ ಬಂಡವಾಳ ಹಾಕುವ ಚಿಂತನೆ ನಡೆಯುತ್ತಿದೆ. ಹೊಸ ಯುನಿಟ್ ಹಾಕಬೇಕು. ಹೊಸ ತಂತ್ರಜ್ಞಾನ ತರಬೇಕು. ವಿಶ್ವೇಶ್ವರಯ್ಯ ಅವರ ಹೆಸರನ್ನು ಮರುಸ್ಥಾಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಯಾವುದೇ ಕ್ಷಣ ವಿಧಾನಸಭೆ ಚುನಾವಣೆ: ಕುಮಾರಸ್ವಾಮಿ
ಶಿವಮೊಗ್ಗ: ರಾಜ್ಯದಲ್ಲಿ ಯಾವ ಕ್ಷಣದಲ್ಲೂ ಚುನಾವಣೆ ಬರಬಹುದು. ನಾವು ಮಾನಸಿಕವಾಗಿ ಸಿದ್ಧರಿರಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕರೆ ನೀಡಿದರು.
ಜಿಲ್ಲಾ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಇನ್ನೂ ಮೂರೂವರೆ ವರ್ಷ ಇದ್ದರೂ ಕಾಂಗ್ರೆಸ್‌ನ ಸ್ವಯಂಕೃತ ಅಪರಾಧಗಳಿಂದ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬರಲಿದೆ. ಪಕ್ಷವನ್ನು ಸಂಘಟಿಸುವ ಕೆಲಸವನ್ನು ಚುರುಕುಗೊಳಿಸಿದರೆ ಶಿವಮೊಗ್ಗದಲ್ಲಿ ಮೂರ್‍ನಾಲ್ಕು ಸ್ಥಾನ ಗೆಲ್ಲುವ ಅವಕಾಶವಿದೆ ಎಂದರು. ಮೈತ್ರಿ ಒಂದು ಭಾಗ. ಆದರೆ ಪಕ್ಷ ಸಂಘಟಿಸುವುದು ಇನ್ನೊಂದು ಭಾಗ. ಮೈತ್ರಿಗೆ ಧಕ್ಕೆ ಆಗದ ರೀತಿಯಲ್ಲಿ ಪಕ್ಷ ಸಂಘಟಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.