![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 9, 2019, 2:36 PM IST
ಮ್ಯಾಂಚೆಸ್ಟರ್: ವಿಶ್ವಕಪ್ ನ ಬಹು ನಿರೀಕ್ಷಿತ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಸಜ್ಜಾಗಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ಮ್ಯಾಂಚೆಸ್ಟರ್ ನಲ್ಲಿ ಲೀಗ್ ಹಂತದಲ್ಲಿ 5 ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡವೇ ಜಯಗಳಿಸಿದೆ. ಹಾಗಾಗಿ ಈ ಟಾಸ್ ಪ್ರಮುಖ ಪಾತ್ರವಹಿದೆ.
ಈ ಮಹತ್ವದ ಪಂದ್ಯಕ್ಕೆ ಭಾರತ ಬದಲಾವಣೆ ಮಾಡಿಕೊಂಡಿದ್ದು ಕುಲದೀಪ್ ಯಾದವ್ ಬದಲು ಯುಜುವೇಂದ್ರ ಚಾಹಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಕಿವೀಸ್ ಕೂಡ ಒಂದು ಬದಲಾವಣೆ ಮಾಡಿದ್ದು ಟಿಮ್ ಸೌಥಿ ಬದಲು ಲ್ಯೂಕಿ ಫರ್ಗುಸನ್ ಸ್ಥಾನ ಪಡೆದಿದ್ದಾರೆ
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾ), ರೋಹಿತ್ ಶರ್ಮ, ಕೆ.ಎಲ್.ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾ), ಮಾರ್ಟಿನ್ ಗಪ್ಟಿಲ್, ಹೆನ್ರಿ ನಿಕೋಲ್ಸ್, ರಾಸ್ ಟೇಲರ್, ಟಾಮ್ ಲ್ಯಾಂಥಮ್, ಜೇಮ್ಸ್ ನೀಶಮ್, ಕಾಲಿನ್ ಡಿ ಗ್ರಾಂಡ್ ಹೋಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲ್ಯೂಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
You seem to have an Ad Blocker on.
To continue reading, please turn it off or whitelist Udayavani.