information Technology Appointment: ಬೆಂಗಳೂರಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ
6 ತಿಂಗಳಲ್ಲಿ ಶೇ.12ರಷ್ಟು ಉದ್ಯೋಗ ಹೆಚ್ಚಳ?, ಸೈಬರ್ ಸೆಕ್ಯುರಿಟಿ ಸೇರಿ ಹಲವು ಕ್ಷೇತ್ರಗಳಲ್ಲಿ ನೇಮಕ
Team Udayavani, Nov 28, 2024, 4:17 AM IST
ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಕಡಿಮೆ ಆಗುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಮುಂದಿನ 6 ತಿಂಗಳ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಹೆಚ್ಚಿನ ಅವಕಾಶಗಳು ಲಭಿಸುವ ಸಾಧ್ಯತೆ ಇದೆ. ಎ.ಐ., ಮಷಿನ್ ಲರ್ನಿಂಗ್‌ಗಳಲ್ಲಿ ಉದ್ಯೋಗದ ಅವಕಾಶಗಳು ಮತ್ತು ನೇಮಕ ಹೆಚ್ಚಾಗಲಿವೆ ಎಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ.
ಈ ನಿಟ್ಟಿನಲ್ಲಿ ಶೇ.62ರಷ್ಟು ನೇಮಕ ನಡೆಯುವ ಬೆಂಗಳೂರು ಅಗ್ರಪಂಕ್ತಿ ಯಲ್ಲಿ ಇರಲಿದೆ ಎಂದು “ಕ್ವೆಸ್ ಕ್ರಾಫ್’ ಎಂಬ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಉಲ್ಲೇಖೀಸಲಾಗಿದೆ. ಹೈದರಾಬಾದ್‌ನಲ್ಲಿ ಶೇ.43.5, ಪುಣೆಯಲ್ಲಿ ಶೇ.10ರಷ್ಟು ನೇಮಕ ನಡೆಯಲಿದೆ ಎನ್ನಲಾಗಿದೆ.
2025ರ 2ನೇ ತ್ತೈಮಾಸಿಕದಲ್ಲಿ ಟೆಸ್ಟಿಂಗ್, ನೆಟ್‌ವರ್ಕಿಂಗ್ ಕ್ಷೇತ್ರದಲ್ಲಿ ಉದ್ಯೋ ಗದ ಅವಕಾಶಗಳು ಶೇ.75 ರಷ್ಟು ಹೆಚ್ಚಾಗಲಿವೆ. ಜನರೇಟಿವ್ ಎ.ಐ., ಡೀಪ್‌ಟೆಕ್ ಮತ್ತು ಕ್ವಾಟಂ ಕಂಪ್ಯೂ ಟಿಂಗ್ ಕ್ಷೇತ್ರದಲ್ಲಿ 2030ರ ಒಳಗಾಗಿ 10 ಲಕ್ಷ ಉದ್ಯೋಗ ಸೃಷ್ಟಿ ಯಾಗಲಿವೆ ಎನ್ನಲಾಗಿದೆ. ದೇಶದಲ್ಲಿ ಡಿಜಿಟಲ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಆಸಕ್ತಿಯಿಂದ ಹಾಗೂ ಯುವಕರು ಈ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದರಿಂದ ಈ ಬೆಳವಣಿಗೆ ಉಂಟಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.