Budget 2024: ಬಜೆಟ್ ನಲ್ಲಿ ಮಹಿಳಾ ಸಬಲೀಕರಣ, ರೈತರ ಆದಾಯಕ್ಕೆ ಹೆಚ್ಚಿನ ಒತ್ತು ಸಾಧ್ಯತೆ…
Team Udayavani, Feb 1, 2024, 10:48 AM IST
ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೊನೆಯ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದು, ಈ ಬಾರಿಯ ಬಜೆಟ್ ನಲ್ಲಿ ರೈತರ ಆದಾಯ, ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಠಿ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ:Union Budget 2024:ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ-ಲೋಕಸಭೆಗೆ ನಿರ್ಮಲಾ ಆಗಮನ
ಮಧ್ಯಂತರ ಬಜೆಟ್ ನಲ್ಲಿ ದೇಶದ ಜನರ ನಿರೀಕ್ಷೆ:
1)ರೈತರಿಗೆ ಬೆಂಬಲ: ಕಳೆದ ಬಾರಿ ಮಳೆ ಕೊರತೆ ಹಾಗೂ ಬೆಳೆ ಹಾನಿಯ ಪರಿಣಾಮ ರಫ್ತನ್ನು ನಿಷೇಧಿಸಲಾಗಿತ್ತು. ಈ ನಿಟ್ಟಿನಲ್ಲಿ 2024ನೇ ಸಾಲಿನ ಮಧ್ಯಂತರ ಬಜೆಟ್ ನಲ್ಲಿ ರೈತರ ಆರ್ಥಿಕತೆ ಹೆಚ್ಚಿನ ಬೆಂಬಲ ನಿರೀಕ್ಷಿಸಲಾಗಿದೆ.
2) ಉದ್ಯೋಗ ಸೃಷ್ಠಿಗೆ ಹೆಚ್ಚಿನ ಒತ್ತು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದ್ದು, ಮಧ್ಯಂತರ ಬಜೆಟ್ ನಲ್ಲಿ ಉದ್ಯೋಗ ಸೃಷ್ಠಿಗೆ ಹೆಚ್ಚಿನ ಒತ್ತು ಕೊಡಲಾಗುವುದು ಎಂದು ನಿರೀಕ್ಷಿಸಲಾಗಿದೆ. ಹೂಡಿಕೆ ಕ್ಷೇತ್ರಕ್ಕೆ ಆದ್ಯತೆ ನೀಡುವ ಮೂಲಕ ಉದ್ಯೋಗಾವಕಾಶ ಸೃಷ್ಠಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
3)ಮೂಲಭೂತ ಸೌಕರ್ಯ: ದೇಶದ ಆರ್ಥಿಕ ಬೆಳವಣಿಗೆ ಜತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆಗಳು, ರೈಲ್ವೆ ಮತ್ತು ಡಿಜಿಟಲ್ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.
4)ಆರ್ಥಿಕ ಸ್ಥಿರತೆ: ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತ ನಡುವೆಯೂ ಭಾರತ ಉತ್ತಮ ಆರ್ಥಿಕ ಪ್ರಗತಿಯಲ್ಲಿದೆ. ಆದರೂ ಆದಾಯ ಮತ್ತು ಖರ್ಚನ್ನು ಸಮತೋಲನದಲ್ಲಿರಿಸಲು ಸರ್ಕಾರ ಚಿತ್ತ ಹರಿಸಿದೆ.
5)ಆದಾಯ ತೆರಿಗೆ ವಿನಾಯ್ತಿ: ಕೆಲವು ಆರ್ಥಿಕ ತಜ್ಞರ ಅಭಿಪ್ರಾಯದ ಪ್ರಕಾರ, ಹಳೆಯ ಮತ್ತು ಹೊಸ ಆದಾಯ ತೆರಿಗೆ ನಿಯಮಗಳ ಅಡಿಯಲ್ಲಿ ತೆರಿಗೆ ಪಾವತಿದಾರರಿಗೆ ಕೆಲವೊಂದು ವಿನಾಯ್ತಿ ಸಿಗುವ ನಿರೀಕ್ಷೆ ಇದೆ ಎನ್ನಲಾಗಿದೆ.
6) ಸಾಮಾಜಿಕ ಭದ್ರತೆಗೆ ಆದ್ಯತೆ: ಕಾರ್ಮಿಕ ವಲಯ ಸೇರಿದಂತೆ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಭದ್ರತೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.
7)ಕಡಿಮೆ ವೆಚ್ಚದ ಗೃಹ ನಿರ್ಮಾಣ; ದೇಶದಲ್ಲಿನ ಬಡವರಿಗಾಗಿ ಕಡಿಮೆ ವೆಚ್ಚದ ಗೃಹ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಮಹತ್ವ ನೀಡುವ ಸಾಧ್ಯತೆ ಇದೆ.
8)ಆಸ್ತಿ ಮಾರಾಟ ತೆರಿಗೆ: ತೆರಿಗೆದಾರರಿಗೆ ಹೆಚ್ಚಿನ ಹೊರೆಯಾಗದಂತೆ ಆರ್ಥಿಕ ಸ್ಥಿತಿ ಸುಧಾರಿಸಲು ಆಸ್ತಿ ಮಾರಾಟದ ತೆರಿಗೆಯನ್ನು ಸಂಗ್ರಹಿಸುವ ಯೋಜನೆಯನ್ನು ಸರ್ಕಾರ ಮುಂದುವರಿಸಬಹುದು.
9)ಮಹಿಳಾ ಸಬಲೀಕರಣ: ಮಹಿಳಾ ಸಬಲೀಕರಣಕ್ಕೆ ಬದ್ಧವಿರುವುದಾಗಿ ತಿಳಿಸಿದ್ದ ಸರ್ಕಾರ ಮಧ್ಯಂತರ ಬಜೆಟ್ ನಲ್ಲಿ ಅಡುಗೆ ಅನಿಲ ಮತ್ತು ಸಾಲಕ್ಕೆ ಸಬ್ಸಿಡಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
10)ಹಸಿರು ಇಂಧನ ಹೂಡಿಕೆ: ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್ ನಲ್ಲಿ ಗ್ರೀನ್ ಹೈಡ್ರೋಜನ್ ಮತ್ತು ಎಲೆಕ್ಟ್ರಿಕ್ ವಾಹನಗಳ ಆವಿಷ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.