ಜಗತ್ತನ್ನೇ ಅಂಗೈಗೆ ತಂದಿರಿಸಿದ ವಿಮಾನ ಯಾನ ಸೇವೆ
ಇಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನ
Team Udayavani, Dec 7, 2020, 5:55 AM IST
ವಿಶ್ವದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ನಾಗರಿಕ ವಿಮಾನಯಾನ ಸೇವೆಯ ಪ್ರಾಮುಖ್ಯದ ಬಗ್ಗೆ ವಿಶ್ವಾದ್ಯಂತ ಅರಿವು ಮೂಡಿಸಲು ಪ್ರತೀ ವರ್ಷದ ಡಿಸೆಂಬರ್ 7 ರಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನವನ್ನು ಆಚರಿಸಲಾಗುತ್ತದೆ.
ಐಸಿಎಒ ಸ್ಥಾಪನೆ
ಅಂತಾರಾಷ್ಟ್ರೀಯ ಸಹಕಾರ ಮತ್ತು ಏಕರೂಪತೆಯನ್ನು ಭದ್ರ ಪಡಿಸುವ ಸಲುವಾಗಿ 1944ರ ಡಿಸೆಂಬರ್ 7ರಂದು ಅಂತಾ ರಾಷ್ಟ್ರೀಯ ನಾಗರಿಕ ವಿಮಾನ ಯಾನ ಸಂಸ್ಥೆ (ಐಸಿಎಒ) ಯನ್ನು ಸ್ಥಾಪಿಸಲಾಯಿತು. ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ಒಪ್ಪಂದಕ್ಕೆ ಸಹಿ ಹಾಕಿದ 50ನೇ ವಾರ್ಷಿಕೋತ್ಸವದ ನೆನಪಿಗಾಗಿ ಐಸಿಎಒ ನಾಗರಿಕ ವಿಮಾನ ಯಾನ ದಿನವನ್ನು ಆಚರಿಸುತ್ತಿದೆ. 1996ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 7ನ್ನು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನ ಎಂದು ಅಧಿಕೃತವಾಗಿ ಘೋಷಿಸಿತು.
ಮಹತ್ವದ ಪಾತ್ರ
ಜಾಗತಿಕ ಸಂಪರ್ಕದ ಎಂಜಿನ್ ಆಗಿ ನಾಗರಿಕ ವಿಮಾನ ಯಾನ ಕ್ಷೇತ್ರ ಕಾರ್ಯ ನಿರ್ವಹಿಸುತ್ತಿದೆ. ತ್ವರಿತ ಸಾರಿಗೆ ಜಾಲ ವಾಗಿರುವ ವಿಮಾನ ಯಾನದ ಪ್ರಾಮುಖ್ಯವನ್ನು ಗುರುತಿ ಸುವುದು ಹಾಗೂ ಅದನ್ನು ಬಲಪಡಿಸುವಲ್ಲಿ ಐಸಿಎಒ ಪಾತ್ರ ಮಹತ್ವದ್ದಾಗಿದೆ.
ಅರ್ಥಪೂರ್ಣ ಉದ್ದೇಶ
ಸುರಕ್ಷತೆ, ಭದ್ರತೆ ಮತ್ತು ವಿಶ್ವಾಸಾರ್ಹ ವಾಯು ಸಾರಿಗೆಗೆ ಯಾವ ಕ್ರಮ ಕೈಗೊಳ್ಳಬೇಕು, ವಿಮಾನ ಯಾನ ಸುರಕ್ಷತೆಗೆ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಭಿವೃದ್ಧಿಪಡಿಸು ವುದು, ಇದಕ್ಕೆ ಸಂಬಂಧಿತ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.
ಮಾಹಿತಿ ರವಾನೆ
ಸರಕಾರಗಳು, ಸಂಸ್ಥೆಗಳು, ವ್ಯವಹಾರಗಳು ಮತ್ತು ವ್ಯಕ್ತಿಗಳ ಸಹಯೋಗದೊಂದಿಗೆ ಐಸಿಎಒ ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನವನ್ನು ವಿವಿಧ ಚಟುವಟಿಕೆಗಳ ಮೂಲಕ ಆಚರಿಸುತ್ತಾ ಬಂದಿದೆ. ವಿಶೇಷವಾಗಿ ಅಂತಾರಾಷ್ಟ್ರೀಯ ನಾಗರಿಕ ವಾಯು ಯಾನ ವಿಷಯಗಳ ಕುರಿತು ವಿಚಾರಗೋಷ್ಠಿಗಳು, ಶೈಕ್ಷಣಿಕ ಉಪನ್ಯಾಸಗಳು, ತರಗತಿಗಳನ್ನು ಹಮ್ಮಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನದ ಮಹತ್ವದ ಬಗೆಗೆ ಜನತೆಗೆ ಮಾಹಿತಿ ಒದಗಿಸಿ ಅವರಲ್ಲಿ ಅರಿವು ಮೂಡಿಸುತ್ತಿದೆ.
ಜಾಗತಿಕ ಬೆಳವಣಿಗೆಯೇ ಧ್ಯೇಯ
2020ರಿಂದ 2022ರ ವರೆಗೆ “ಜಾಗತಿಕ ವಿಮಾನ ಯಾನ ಬೆಳವಣಿಗೆಗಾಗಿ ಸುಧಾರಿತ ಆವಿಷ್ಕಾರ’ ಎಂಬ ಧ್ಯೇಯ ವಾಕ್ಯವನ್ನಿರಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.