ಕಿಷ್ಕಿಂದಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಯೋಗ ವಿವಿ ಸ್ಥಾಪನೆ ಕಾರ್ಯ ಚುರುಕುಗೊಳಿಸಲು ಮನವಿ

Team Udayavani, Jun 20, 2020, 4:55 PM IST

ಕಿಷ್ಕಿಂದಾ  ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಯೋಗ ವಿವಿ ಸ್ಥಾಪನೆ ಕಾರ್ಯ ಚುರುಕುಗೊಳಿಸಲು ಮನವಿ

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ನಿಯೋಜಿತ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಶ್ವವಿದ್ಯಾಲಯ ಸ್ಥಾಪನೆ ಕಾರ್ಯ ಚುರುಕುಗೊಳಿಸುವಂತೆ ಸಂಸದ ಕರಡಿ ಸಂಗಣ್ಣ ಅವರಿಗೆ ಗಂಗಾವತಿ ನಾಗರೀಕರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಮಂಜುನಾಥ ಸ್ವಾಮೀ ಹಿರೇಮಠ ಮಾತನಾಡಿ, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದಿಲ್ಲಾ ಒಂದು ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿವೆ ಅದರಲ್ಲೂ ನೆರೆಯ ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಎರಡೆರಡು ವಿಶ್ವವಿದ್ಯಾಲಯಗಳಿದ್ದು ಕೊಪ್ಪಳ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇಲ್ಲ ಕೇಂದ್ರ ಸರಕಾರ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದಲ್ಲಿ ಅಂತರಾಷ್ಟ್ರೀಯ ಯೋಗ‌ ಮತ್ತು ಪ್ರಕೃತಿ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾಪ ಮಾಡಿದ್ದು ತಾವು ಸಹ ಸ್ಥಳ ಪರಿಶೀಲನೆ ಮಾಡಿ ಕೇಂದ್ರಕ್ಕೆ ಕಳೆದ ವರ್ಷ ಪ್ರಸ್ತಾವನೆ ಸಲ್ಲಿಸಿದ್ದು ವಿವಿ ಸ್ಥಾಪನೆಯ ಪ್ರಸ್ತಾಪ ಬೇಗನೆ ಕಾರ್ಯಗತ ಮಾಡಬೇಕು.

ಸೂಕ್ತವಾಗಿದೆ: ಏಕೆಂದರೆ ಜಿಲ್ಲೆ ಅದರಲ್ಲೂ ಗಂಗಾವತಿ ತಾಲೂಕು ವಿಶ್ವವಿದ್ಯಾಲಯ ಸ್ಥಾಪನೆಗೆ ಅತ್ಯಂತ ಪ್ರಶಸ್ತವಾಗಿದೆ. ತುಂಗಭದ್ರಾ ನದಿ ತೀರದ ಆನೆಗೊಂದಿ ಪ್ರದೇಶವು ವಿಶ್ವಪರಂಪರೆಯ ತಾಣವಾದ ಹಂಪಿಯ ಒಂದು ಭಾಗವೇ ಆಗಿದ್ದು ಭೌಗೋಳಿಕವಾಗಿ, ಚಾರಿತ್ರಿಕವಾಗಿ , ಪೌರಾಣಿಕವಾಗಿ ಅತ್ಯಂತ ಮಹತ್ವದ ಸ್ಥಳವಾಗಿದೆ. ಇದು ರಾಮಾಯಣ ಕಾವ್ಯದ ಕಿಷ್ಕಂದೆ ರಾಜ್ಯವೆಂದು ಹೆಸರುವಾಸಿಯಾಗಿದೆ. ಈ ಸ್ಥಳ ಹನುಮನು ಜನಿಸಿದ ನೆಲೇವಿಡು, ವೀರ ಕಂಪಿಲರಾಯ ಗಂಡುಗಲಿ ಕುಮಾರರಾಮರು ಆಳಿದ ಗಂಡುಮೆಟ್ಟಿನ ವೀರಭೂಮಿಯಿದು, ದಕ್ಷಿಣ ಭರತದ ಶ್ರೇಷ್ಟ ವಿಜಯನಗರ ಸಾಮ್ರಾಜ್ಯ ಉದಿಸಿದ್ದು ಇಲ್ಲಿಯ ಆನೆಗೊಂದಿಯಲ್ಲಿ .ಇಂತ ಐತಿಹಾಸಿಕ ಹಿನ್ನಲೆಯುಳ್ಳ ನದಿ-ಬೆಟ್ಟಗಳ ಸಾಲುಗಳ, ರಾಮ-ಸೀತೆಯರು ನಡೆದಾಡಿದ ಆಂಜನೇಯ, ಶಬರೀ ಬಾಳಿದ ನೆಲವಿದು. ದೇಶದ ಪಂಚ ಸರೋವರಗಳಲ್ಲಿ ಒಂದಾದ ಪಂಪಾಸರೋವರ, ಅಂಜನಾದ್ರಿ ಬೆಟ್ಟ ಹೀಗೆ ಹಲವು ಪ್ರಖ್ಯಾತ ಸ್ಥಳಗಳಿದ್ದು ವಿವಿ ಸ್ಥಾಪನೆಗೆ ಪ್ರಾಶ್ಯಸ್ತವಾಗಿದೆ.

3000 ವರ್ಷ ಇತಿಹಾಸ ಇರುವಂತಹ ಹಿರೇಬೆಣಕಲ್ ಗ್ರಾಮದ ಶಿಲಾಯುಗದ ಸಮಾಧಿಗಳಿರುವ ಬೆಟ್ಟಕ್ಕೆ ಸಂಬಂಧಿಸಿದ ಏಳು ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸಿ, ಅಳಿವಿನಂಚಿನಲ್ಲಿರುವ ಶಿಲಾಯುಗದ ಗೋರಿಗಳು ಮತ್ತು ಗುಹಾಚಿತ್ರಗಳನ್ನು ಸಂರಕ್ಷಿಸಿ ರಾಷ್ಟ್ರಮಟ್ಟದಲ್ಲಿ ಪ್ರವಾಸೋದ್ಯಮವಾಗಿ ಅಭಿವೃದ್ಧಿ ಪಡಿಸಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ  ಡಾ ವೀರನಗೌಡ ಎಸ್ ಪಾಟೀಲ್, ಪ್ರಕಾಶ್ ಚಂದ್ ಚೋಪಡಾ, ಉಗಮ ರಾಜ್ ಜೈನ್, ವಾಗೇಶ ಕುಮಾರ, ಡಾ. ಎ.ಸತೀಶ ಕುಮಾರ, ಪ್ರತಾಪ್ ಸೂರ್ಯ ಶಾಸ್ತ್ರಿ, ನೇತ್ರಾಜಿ ಗುರುವಿನ ಮಠ, ಹೆಚ.ಎಂ.ಮಂಜುನಾಥ ವಕೀಲರು, ಬಿ.ಎಂ.ರಮೇಶ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.