ಐಪಿಎಲ್ ಮುಂದೂಡಿಕೆ ಬಹುತೇಕ ಖಚಿತ!
Team Udayavani, Apr 13, 2020, 5:30 AM IST
ಹೊಸದಿಲ್ಲಿ: ಕೋವಿಡ್-19 ಸೋಂಕು ಪ್ರಸರಣವನ್ನು ತಡೆಗಟ್ಟುವುದಕ್ಕಾಗಿ ದೇಶದಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್ ಬಹುತೇಕ ಎ. 30ರ ವರೆಗೆ ವಿಸ್ತರಿಸಲಾಗಿದೆ. ಹೀಗಾಗಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೂಡ ಮುಂದೂಡುವ ಸ್ಪಷ್ಟತೆ ಕಂಡುಬಂದಿದೆ.
ವರದಿಗಳ ಪ್ರಕಾರ ದೇಶದಲ್ಲಿ ಕೋವಿಡ್-19 ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದ್ದು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಸರಕಾರ ಕಠಿನ ಕ್ರಮಗಳನ್ನು ತರುತ್ತಿದೆ. ಈ ನಿಟ್ಟಿನಲ್ಲಿ ಬಿಸಿಸಿಐ ಐಪಿಎಲ್ ಮುಂದೂಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವುದೊಂದೆ ಬಾಕಿ. ಮಾರ್ಚ್ 29ರಿಂದಲೇ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಸೋಂಕಿನಿಂದ ಎಪ್ರಿಲ್ 15ಕ್ಕೆ ಬಿಸಿಸಿಐ ದಿನಾಂಕ ಮುಂದೂಡಿತ್ತು. ಇದೀಗ ಸರಕಾರ ಎ. 30ರ ವರೆಗೆ ಲಾಕ್‌ಡೌನ್ ವಿಸ್ತರಿಸಿದ್ದರಿಂದ ಐಪಿಎಲ್ ಕೂಡ ಮುಂದೂಡುವುದು ಸ್ಪಷ್ಟವಾಗಿದೆ.
ದೇಶಾದ್ಯಂತ ಲಾಕ್‌ಡೌನ್ ಬಹುತೇಕ ಎ. 30ರ ವರೆಗೆ ವಿಸ್ತರಣೆಯಾಗಿದೆ. ಆದರೆ ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ನೀಡಿದ ಮಾಹಿತಿಯಂತೆ ಸದ್ಯಕ್ಕೆ ಐಪಿಎಲ್ ನಡೆಯುವ ಮಾತೇ ಇಲ್ಲ. ಹಾಗಂತ ಕೂಟ ರದ್ದಾಗುವುದೂ ಇಲ್ಲ ಎಂದು ಅವರು ಹೇಳಿದ್ದಾರೆ.
ಐಪಿಎಲ್ ಟೂರ್ನಿಯನ್ನು ರದ್ದು ಮಾಡು ವುದಿಲ್ಲ. ಒಂದು ವೇಳೆ ಮಾಡಿದ್ದೇ ಆದಲ್ಲಿ 3,000 ಕೋಟಿ ರೂ. ನಷ್ಟ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ, ಪಾಲುದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅರ್ಥ ಮಾಡಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಐಪಿಎಲ್ ನಡೆಸಲು ಎರಡು ಹಾದಿಗಳು ನಮ್ಮ ಮುಂದೆ ಇವೆ. ಒಂದು ಸೆಪ್ಟಂಬರ್ ಅಥವಾ ಅಕ್ಟೋಬರ್ ಆರಂಭದಲ್ಲಿ ಅಂದರೆ, ಐಸಿಸಿ ಟಿ20 ವಿಶ್ವಕಪ್ ಆರಂಭವಾಗುವ ಮುನ್ನ ಆಯೋಜಿಸಬೇಕಾಗುತ್ತದೆ. ಇದೂ ಸಾಧ್ಯವಾಗದಿದ್ದರೆ ಐಸಿಸಿ, ಕ್ರಿಕೆಟ್ ಆಸ್ಟ್ರೇಲಿಯ ಹಾಗೂ ಪಾಲುದಾರರು ಒಪ್ಪಿಕೊಂಡು ಟಿ20 ವಿಶ್ವಕಪ್ ಮುಂದೂಡುವ ಪ್ರಸ್ತಾವವನ್ನು ಇರಿಸಿ ಐಪಿಎಲ್ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಪಿಎಲ್ ಮರೆತುಬಿಡಿ
ಈ ಬಾರಿಯ ಐಪಿಎಲ್ ನಡೆಯುವ ಸಾಧ್ಯತೆಗಳು ತೀರಾ ಮಂಕಾಗಿವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಕೊಂಡಿದ್ದಾರೆ. ಜಗತ್ತಿನಾದ್ಯಂತ ಜನಜೀವನಕ್ಕೆ ಸಂಚಕಾರ ಬಂದಿರುವಾಗ ಕ್ರೀಡೆಯ ಭವಿಷ್ಯ ಎಲ್ಲಿದೆ. ಈಗಿನ ಸನ್ನಿವೇಶದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ, ವಿಮಾನ ನಿಲ್ದಾಣಗಳು ಮುಚ್ಚಿವೆ, ಜನರು ಮನೆಯಲ್ಲಿಯೇ ಇದ್ದಾರೆ, ಕಚೇರಿಗಳು ಲಾಕ್‌ಡೌನ್ ಆಗಿವೆ. ಯಾರೂ ಎಲ್ಲಿಗೂ ಹೋಗದಂತಾಗಿದೆ. ಮೇ ತಿಂಗಳ ಮಧ್ಯದವರೆಗೂ ಲಾಕ್‌ಡೌನ್ ಮುಂದುವರಿಯುವ ಸಾಧ್ಯತೆ ಇದೆ. ಒಂದು ವೇಳೆ ಐಪಿಎಲ್ ನಡೆಸಿದರೆ ಆಟಗಾರರನ್ನು ಎಲ್ಲಿಂದ ಕರೆತರುವುದು, ಆಟಗಾರರು ಏಲ್ಲಿ ಪ್ರಯಾಣಿಸುತ್ತಾರೆ, ಪ್ರಪಂಚದಲ್ಲಿ ಎಲ್ಲಿಯೂ ಯಾವುದೇ ರೀತಿಯ ಕ್ರೀಡೆಯ ಪರ ಸನ್ನಿವೇಶ ಇಲ್ಲ. ಸದ್ಯಕ್ಕೆ ಐಪಿಎಲ್ ಮರೆತುಬಿಡಿ ಎಂದು ಗಂಗೂಲಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.