IPS Officer letter: ತಪ್ಪು ಮಾಡಿ ಬೇರೆಯವರ ಮೇಲೆ ಆರೋಪಿಸುವ ಎಚ್‌ಡಿಕೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿ ಸಚಿವ ಸಂಪುಟದ ಮುಂದೆ ಮಂಡಿಸುವೆವು

Team Udayavani, Sep 30, 2024, 7:21 AM IST

Mysuru-CM

ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಪ್ಪು ಮಾಡಿರುವ ಕಾರಣ ಬೇರೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ. ಗುದ್ದಾಡಿದರೆ ಹೊಲಸು ನಿಮಗೂ ಮೆತ್ತಿಕೊಳ್ಳತ್ತದೆ, ಅದನ್ನು ಹಂದಿಗಳು ಸಂಭ್ರಮಿಸುತ್ತವೆ’ ಎಂಬ ಜಾರ್ಜ್‌ ಬರ್ನಾರ್ಡ್‌ ಶಾ ಅವರ ಜನಪ್ರಿಯ ನುಡಿಗಟ್ಟನ್ನು ಉಲ್ಲೇಖೀಸಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಗಳಿಗೆ ಲೋಕಾಯುಕ್ತ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್‌ ರಾವ್‌ ಪತ್ರದ ಮೂಲಕ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು.

ಎಡಿಜಿಪಿ ಎಂ. ಚಂದ್ರಶೇಖರ್‌ ರಾವ್‌ ಅವರು ಕುಮಾರಸ್ವಾಮಿಯನ್ನು ಹಂದಿ ಎಂದು ಕರೆದಿದ್ದಾರಾ? ಇಲ್ಲ ತಾನೇ. ಅವರು ಇಂಗ್ಲಿಷ್‌ನ ಜಾರ್ಜ್‌ ಬರ್ನಾರ್ಡ್‌ ಶಾ ಅವರ ವ್ಯಾಕ್ಯವನ್ನು ಉಲ್ಲೇಖಿಸಿದ್ದಾರೆ ಅಷ್ಟೇ. ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು. ಅದಕ್ಕೆ ಕೆಲವು ಉತ್ತರಗಳನ್ನು ಕೊಟ್ಟಿದ್ದಾರೆ. ಹಂದಿ ಎನ್ನುವ ಪದವನ್ನು ಕುಮಾರಸ್ವಾಮಿ ಅವರಿಗೆ ಬಳಸಿದ್ದಾರೆ ಎಂದು ಹೇಗೆ ಹೇಳುತ್ತೀರಾ. ನಾನು ಈ ವಿಚಾರದ ಬಗ್ಗೆ ಸುದೀರ್ಘ‌ ವಿವರಣೆ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ ಎಂದರು.

ನನಗೆ ಸ್ನೇಹಮಯಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನು ನೋಡಿಲ್ಲ. ಅವರ ಮೇಲೆ ಏನೇನು ಕೇಸ್‌ಗಳಿವೆ ಅದು ನನಗೆ ಗೊತ್ತಿಲ್ಲ. ಅವರು ಇಡಿಗೆ ದೂರು ನೀಡಿರಬಹುದು. ದೂರು ನೀಡಿದ ತತ್‌ಕ್ಷಣ ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ದೂರು ಕೊಟ್ಟಿದ್ದಾರೆ ಕೊಡಲಿ ಬಿಡಿ. ಈಗ ಮುಡಾ ವಿಚಾರ ನ್ಯಾಯಾಲಯದಲ್ಲಿದೆ, ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ದಸರಾ ಉತ್ಸವಗಳ ಸಿದ್ಧತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅ. 2ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜಾತಿ ಗಣತಿ ವರದಿ ಜಾರಿ ಖಚಿತ: ಸಿಎಂ
ಮೈಸೂರು: ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದಲೇ ನಮ್ಮ ಸರಕಾರ ಸಾಮಾಜಿಕ ಗಣತಿ (ಜಾತಿಗಣತಿ)ಯನ್ನು ನಡೆ ಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲಾ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಗಣತಿ ವರದಿಯನ್ನು ಸರಕಾರ ಸ್ವೀಕರಿಸಿದೆ. ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಂಪುಟದ ಮುಂದಿರಿಸಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಜಾತಿ ಜನಗಣತಿ ಕಾಂಗ್ರೆಸ್‌ ಪಕ್ಷದ ಸಿದ್ಧಾಂತವೂ ಆಗಿದೆ ಎಂದರು.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.