ಶರಾವತಿಯಲ್ಲಿ ನೀರಾವರಿ ಯೋಜನೆ ಸಲ್ಲದು


Team Udayavani, Jul 4, 2019, 6:00 AM IST

Western-Ghats

ಬೆಂಗಳೂರು: ‘ಶರಾವತಿ ಸೇರಿದಂತೆ ಪಶ್ಚಿಮಘಟ್ಟಗಳಲ್ಲಿ ಇನ್ನಾವುದೇ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ’ ಎಂದು ಪಶ್ಚಿಮಘಟ್ಟಗಳ ಸಂರಕ್ಷಣೆ ಕಾರ್ಯಪಡೆಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶರಾವತಿ ಮತ್ತು ಅಘನಾಶಿನಿಯಿಂದ ಬೆಂಗಳೂರಿಗೆ ನೀರು ತರಬೇಕು ಎಂಬ ಚರ್ಚೆ ನಡೆಯುವ ಹೊತ್ತಿಗೇ ಪಶ್ಚಿಮ ಘಟ್ಟಗಳ ಕಾರ್ಯಪಡೆ ಸರ್ಕಾರಕ್ಕೆ ಇಂಥದ್ದೊಂದು ಶಿಫಾರಸು ನೀಡಿದೆ.

‘ಈಗಾಗಲೇ ಅನೇಕ ಯೋಜನೆಗಳನ್ನು ಪಶ್ಚಿಮಘಟ್ಟ ಅರಣ್ಯ ಪ್ರದೇಶಗಳಲ್ಲಿ ಕೈಗೆತ್ತಿ ಕೊಳ್ಳಲಾಗಿದೆ. ಈ ಮಧ್ಯೆ ಎತ್ತಿನಹೊಳೆ ಯೋಜನೆ ಬೇರೆ ಬರುತ್ತಿದೆ. ಮುಂದೆಯೂ ಇಂತಹ ಯೋಜನೆಗಳನ್ನು ಕೈಗೊಂಡರೆ, ಅದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಇನ್ಮುಂದೆ ಶರಾವತಿಯೂ ಸೇರಿದಂತೆ ಯಾವುದೇ ಯೋಜನೆಗಳನ್ನು ಈ ಭಾಗದಲ್ಲಿ ಕೈಗೆತ್ತಿಕೊಳ್ಳ ದಿರುವುದು ಸೂಕ್ತ’ ಎಂದು ಕಾರ್ಯಪಡೆಯು ಸಲ್ಲಿಸಿರುವ ಅಂತಿಮ ವರದಿಯಲ್ಲಿ ತಿಳಿಸಿದೆ.

ಸುಮಾರು ಎರಡು ವರ್ಷಗಳ ಕಾಲ ಅಧ್ಯಯನ ನಡೆಸಿ ಸಿದ್ಧಪಡಿಸಿದ ‘ಪಶ್ಚಿಮಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಅಧ್ಯಯನ ಮತ್ತು ಶಿಫಾರಸುಗಳ ಅಂತಿಮ ವರದಿ’ಯಲ್ಲಿ ಇದನ್ನು ಉಲ್ಲೇಖೀಸಿದೆ. ನಗರದ ಮಲ್ಲೇಶ್ವರದಲ್ಲಿರುವ ಅರಣ್ಯ ಭವನದಲ್ಲಿ ಗುರುವಾರ ಈ ವರದಿಯನ್ನು ಬಿಡುಗಡೆ ಮಾಡಿದ ಕಾರ್ಯಪಡೆ ಅಧ್ಯಕ್ಷ ಡಾ.ಎಸ್‌. ಚಂದ್ರಶೇಖರ್‌, ನಂತರ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು.

ಪಶ್ಚಿಮಘಟ್ಟದ ಸಾವಿರಾರು ಎಕರೆ ಪ್ರದೇಶಗಳಲ್ಲಿ ಈಗಾಗಲೇ ಅರಣ್ಯ ಜಲವಿದ್ಯುತ್‌ ಸ್ಥಾವರ, ರೈಲು ಹಳಿಗಳು, ವಿದ್ಯುತ್‌ ಮಾರ್ಗಗಳು ಮತ್ತಿತರ ಯೋಜನೆಗಳು ಸ್ಥಾಪನೆಗೊಂಡಿವೆ. ಇದೇ ರೀತಿ ಮುಂದುವರಿದರೆ ಪರಿಸರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ಕಾರ್ಯಪಡೆ, ಈಗ ರಾಜ್ಯದಲ್ಲಿ ಸ್ಥಾಪನೆಯಾಗಿರುವ ಸ್ಥಾವರಗಳ ಕುರಿತು ಪುನರ್‌ವಿಮರ್ಶೆ ಮಾಡುವ ಅಗತ್ಯವಿದೆ ಎಂದೂ ಹೇಳಿದೆ.

‘ಆಗಿದ್ದಾಯ್ತು; ಮುಂದೆ ಆಗೋದು ಬೇಡ’: ಎತ್ತಿನಹೊಳೆ ಬಗ್ಗೆ ಕಾರ್ಯಪಡೆ ನಿಲುವೇನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ಉದ್ದೇಶಿತ ಯೋಜನೆ ಈಗಾಗಲೇ ಅನುಷ್ಠಾನಗೊಳ್ಳುತ್ತಿದೆ. ಆದ್ದರಿಂದ ಆಗಿರುವುದನ್ನು ನಿಲ್ಲಿಸಿ ಎಂದು ಹೇಳಲು ಆಗುವುದಿಲ್ಲ. ಸಾಧ್ಯವಾದಷ್ಟು ಅರಣ್ಯ ಉಳಿಸಬೇಕು ಎಂದು ಹೇಳಿದ್ದೇವೆ. ಇನ್ನು ಈ ಯೋಜನೆ ಬಗೆಗಿನ ನಿಲುವನ್ನು ಸರ್ಕಾರಕ್ಕೆ ಬಿಡುತ್ತೇವೆ’ ಎಂದಷ್ಟೇ ಹೇಳಿದರು.

ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ 22 ಮುಖ್ಯ ನದಿಗಳು ಮತ್ತು 180 ಉಪನದಿಗಳು ಹುಟ್ಟುತ್ತವೆ. ಆ ಎಲ್ಲ ನದಿ ಮೂಲಗಳನ್ನು ಸಂರಕ್ಷಿಸಿ, ಅವುಗಳು ಸದಾ ಜೀವನದಿಗಳಾಗಿ ಇರುವಂತೆ ಕಾಪಾಡುವುದು ಆದ್ಯಕರ್ತವ್ಯ. ಆದರೆ, ನದಿ ದಂಡೆಗಳಲ್ಲಿ ಇರುವ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರವಾಸಿಗಳು ಬಹಿರ್ದೆಸೆಗೆ ಹೋಗುತ್ತಿರುವುದು ಹೆಚ್ಚಾಗಿದೆ. ಇದನ್ನು ತಪ್ಪಿಸಲು ನದಿಗಳ ಸಮೀಪ ಹಾಗೂ ಶಾಲೆಗಳು, ಆರೋಗ್ಯ ಕೇಂದ್ರಗಳ ಸಮೀಪ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ, ಒಳಚರಂಡಿ ವ್ಯವಸ್ಥೆ ಕಲ್ಪಿಸುವ ತುರ್ತು ಅಗತ್ಯವಿದೆ.

ಅಲ್ಲದೆ, ಪಶ್ಚಿಮಘಟ್ಟ ವ್ಯಾಪ್ತಿಯ ಗ್ರಾಮ, ಪಟ್ಟಗಳಲ್ಲಿ ಶೌಚಾಲಯಗಳ ಕೊರತೆ ಇರುವುದರಿಂದ ಬಹಿರ್ದೆಸೆ ಪದ್ಧತಿ ಈಗಲೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಮನೆಗಳಿಗೂ ಶೌಚಾಲಯ ನಿರ್ಮಾಣದ ಜತೆಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದೂ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.