ಸಂಕ್ರಾಂತಿಗೆ ಕೈಗೆ ಸಾರಥಿ? ಇಂದು ಸಿದ್ದು ದಿಲ್ಲಿಗೆ; ನಾಳೆ ಸೋನಿಯಾ ಜತೆ ಚರ್ಚೆ
Team Udayavani, Jan 13, 2020, 6:45 AM IST
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಸಾರಥಿ ಯಾರು ಎಂಬ ಪ್ರಶ್ನೆಗೆ ಸಂಕ್ರಾಂತಿ ವೇಳೆಗೆ ಉತ್ತರ ಸಿಗುವ ಸಂಭವ ಇದೆ.
ವಿಪಕ್ಷ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಾಜಿ ಸಿಎಂ ಸಿದ್ದರಾಮಯ್ಯಅವರನ್ನು ಸೋಮ ವಾರ ದಿಲ್ಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಮಂಗಳವಾರ ಎರಡು ಪ್ರಮುಖ ಹುದ್ದೆಗಳಿಗೆ ಸಂಬಂಧಿಸಿ ಉಭಯ ನಾಯಕರು ಚರ್ಚೆ ನಡೆಸಲಿರುವರು.
ನಾಯಕತ್ವದ ಕುರಿತು ಎಐಸಿಸಿ ವೀಕ್ಷಕರು ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಯಾರಿಗೆ ಯಾವ ಹುದ್ದೆ ನೀಡಬೇಕೆನ್ನುವ ಕುರಿತು ನೇರವಾಗಿ ರಾಜ್ಯ ನಾಯಕರ ಅಭಿ ಪ್ರಾಯ ಪಡೆಯಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಅದರ ಭಾಗವಾಗಿಯೇ ಸಿದ್ದರಾಮಯ್ಯ ಅವರನ್ನು ದಿಲ್ಲಿಗೆ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿತವಾಗಿ ಎದುರಿಸಲು ಸಾಮಾಜಿಕ ನ್ಯಾಯದ ಆಧಾರದಲ್ಲಿ ಯಾವ ರೀತಿಯಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಬೇಕೆಂಬ ಕುರಿತು ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಸೋನಿಯಾ ಗಾಂಧಿ ಅವರು ಪಡೆಯುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂ ರಾವ್ ರಾಜೀನಾಮೆ ಸಲ್ಲಿಸಿರುವುದರಿಂದ ಆ ಹುದ್ದೆಗೆ ಬೇರೆ ಯವರನ್ನು ಆಯ್ಕೆ ಮಾಡುವ ಕುರಿತಂತೆಯೂ ಈ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹುದ್ದೆ ಗೊಂದಲ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ವಿಪಕ್ಷ ನಾಯಕರೂ ಆಗಿದ್ದಾರೆ. ಆದರೆ ಮೂಲ ಕಾಂಗ್ರೆಸ್ ನಾಯಕರು ಒಂದು ಹುದ್ದೆಯನ್ನು ಬೇರೆಯವರಿಗೆ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯ ಮಾತ್ರ ಎರಡೂ ಹುದ್ದೆ ಇಲ್ಲದಿದ್ದರೆ ತನಗೆ ಯಾವುದೇ ಜವಾಬ್ದಾರಿ ಬೇಡ ಎನ್ನುವ ರೀತಿ ಹೈಕಮಾಂಡ್‌ಗೆ ಸಂದೇಶ ರವಾನೆ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ನೇರವಾಗಿಯೇ ಅವರ ಅಭಿಪ್ರಾಯ ಪಡೆದು ಪಕ್ಷದ ಹಿತದೃಷ್ಟಿಯಿಂದ ಎರಡೂ ಹುದ್ದೆಗಳಿಗೆ ಪ್ರತ್ಯೇಕ ನಾಯಕರನ್ನು ನೇಮಕ ಮಾಡುವ ಬಗ್ಗೆ ಅವರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಒಂದೊಮ್ಮೆ ಒಬ್ಬರಿಗೆ ಒಂದೇ ಹುದ್ದೆ ನೀಡಬೇಕೆಂಬ ತೀರ್ಮಾನ ಕೈಗೊಂಡರೆ ಸಿದ್ದರಾಮಯ್ಯ ಯಾವ ಹುದ್ದೆ ಬಯಸುತ್ತಾರೆ ಎಂಬ ಬಗ್ಗೆಯೂ ಸೋನಿಯಾ ಗಾಂಧಿಯವರು ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಒಬ್ಬರಿಗೆ ಒಂದು ಹುದ್ದೆ ನೀಡಬೇಕೆಂಬ ವಿಚಾರದಲ್ಲಿ ಸಹಮತ ವ್ಯಕ್ತಪಡಿಸಿ ದ್ದಾರೆ ಎನ್ನಲಾಗಿದೆ. ಅವರು ವಿಪಕ್ಷ ನಾಯಕ ಸ್ಥಾನ ದಲ್ಲಿ ಮುಂದುವರಿಯುವ ಇಚ್ಛೆ ಹೊಂದಿದ್ದಾರೆ ಎನ್ನ ಲಾಗುತ್ತಿದೆ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕರ ಸ್ಥಾನಕ್ಕೆ ಯಾರು ಸೂಕ್ತ ಎಂಬ ಬಗ್ಗೆ ಸಿದ್ದರಾಮಯ್ಯ ಅಭಿಪ್ರಾಯ ಪಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.