Israel-Iran Tensions: ಇಸ್ರೇಲ್ ವೈಮಾನಿಕ ದಾಳಿಗೆ ಇರಾನ್ ನ ಇಬ್ಬರು ಸೈನಿಕರ ಸಾ*ವು
ಇರಾನ್ ಮೇಲಿನ ಇಸ್ರೇಲ್ ದಾಳಿ ಸ್ವಯಂ ರಕ್ಷಣೆಯ ಭಾಗವಾಗಿದೆ
Team Udayavani, Oct 26, 2024, 6:03 PM IST
ಟೆಹ್ರಾನ್(ಇರಾನ್): ಇರಾನ್ ಮೇಲೆ ಇಸ್ರೇಲ್ ದಾಳಿಯನ್ನು ಮುಂದುವರಿಸಿದ್ದು, ಶನಿವಾರ (ಅ.26) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಇರಾನ್ ಯೋಧರು ಸಾವನ್ನಪ್ಪಿರುವುದಾಗಿ ಇರಾನ್ ತಿಳಿಸಿದೆ.
ಹಮಾಸ್ ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮೇಲೆ ದಾಳಿ ನಡೆಸಿತ್ತು. ಬಳಿಕ ಎರಡು ದೇಶಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು. ಅದರ ಪರಿಣಾಮ ಇರಾನ್ ಮಿಲಿಟರಿ ನೆಲೆ ಮೇಲೆ ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸುವುದಾಗಿ ಇಸ್ರೇಲ್ ರಕ್ಷಣಾ ಪಡೆ ಘೋಷಿಸಿತ್ತು.
ಇಂದು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಇರಾನ್ ಸೈನಿಕರು ಕೊನೆಯುಸಿರೆಳೆದಿರುವುದಾಗಿ ಇರಾನ್ ಸ್ಟೇಟ್ ಟೆಲಿವಿಷನ್ ವರದಿ ಮಾಡಿದೆ. ಇದು ಇಸ್ರೇಲ್ ನ ಕ್ರಿಮಿನಲ್ ಜಿಯೋನಿಷ್ಟ್ ಆಡಳಿತವಾಗಿದೆ ಎಂದು ಇರಾನ್ ಆಕ್ರೋಶ ವ್ಯಕ್ತಪಡಿಸಿದೆ.
ಏತನ್ಮಧ್ಯೆ ಶ್ವೇತ ಭವನ, ಇಸ್ರೇಲ್ ವೈಮಾನಿಕ ದಾಳಿ ನಡೆಸಲಿದೆ ಎಂಬ ಮಾಹಿತಿಯನ್ನು ನೀಡಿತ್ತು. ಆದರೆ ಈ ಕಾರ್ಯಾಚರಣೆಯಲ್ಲಿ ಅಮೆರಿಕದ ಸೈನಿಕರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದು, ಇರಾನ್ ಮೇಲಿನ ಇಸ್ರೇಲ್ ದಾಳಿ ಸ್ವಯಂ ರಕ್ಷಣೆಯ ಭಾಗವಾಗಿದೆ ಎಂದು ತಿಳಿಸಿದೆ.
ಶನಿವಾರ ಟೆಹ್ರಾನ್ ನಲ್ಲಿ ಭಾರೀ ಪ್ರಮಾಣದ ಸ್ಫೋಟದ ಸದ್ದು ಕೇಳಿಸಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ.ಆರಂಭದಲ್ಲಿ ವಿವರವನ್ನು ತಡೆಹಿಡಿದಿದ್ದು, ನಂತರ ದಾಳಿ ಇರಾನ್ ನ ವೈಮಾನಿಕ ರಕ್ಷಣಾ ವ್ಯವಸ್ಥೆಯ ಕೇಂದ್ರದ ಮೇಲೆ ನಡೆಸಲಾಗಿತ್ತು ಎಂಬುದನ್ನು ಬಹಿರಂಗಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.